ಅರಸೀಕೆರೆ: ತಮ್ಮ ಅಧಿಕಾರವಧಿಯಲ್ಲಿ ದೇವೇಗೌಡರು ರೈತರ ಹಿತಾಸಕ್ತಿ, ಹಿಂದುಳಿದ ವರ್ಗ ಹಾಗೂ ಮಹಿಳೆಯರಿಗೆ ಮೀಸಲಾತಿ ನೀಡಿದ್ದು, ಎತ್ತಿನಹೊಳೆ ನೀರಾವರಿಯ ಕಾಮಗಾರಿಗೆ ಅರಣ್ಯ ಇಲಾಖೆ ಒಡ್ಡಿದ್ದ ತಡೆಯನ್ನು ಪ್ರಸ್ತಾಪಿಸಿ, ಕಾಮಗಾರಿಗೆ ಅನುವು ಮಾಡಿಕೊಟ್ಟಿದ್ದಾರೆ. ಅದರ ಫಲವಾಗಿ ಇಂದು ಕಾಮಗಾರಿ ಪ್ರಗತಿಯಲ್ಲಿದೆ’ ಎಂದು ಜೆಡಿಎಸ್ ಮುಖಂಡ ಹೊಸೂರು ಗಂಗಾಧರ್ ಹೇಳಿದರು.

ನಗರದ ಪಿ.ಪಿ.ವೃತ್ತದಲ್ಲಿ ತಾಲ್ಲೂಕಿನ ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು ಸೋಮವಾರ ಹಮ್ಮಿಕೊಂಡಿದ್ದ ಎಚ್.ಡಿ. ದೇವೇಗೌಡರ 94 ನೇ ಜನ್ಮದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.ದೆಹಲಿಯ ಕೆಂಪು ಕೋಟೆಯಲ್ಲಿ ತ್ರಿವಣ ಧ್ವಜವನ್ನು ಹಾರಿಸಿದ ಏಕೈಕ ಕನ್ನಡಿಗ ದೇವೇಗೌಡರು ಎಂದು ಹೇಳಿದರು.

ಮಾಜಿ ಶಾಸಕ ಜಿ.ಎಸ್.ಪರಮೇಶ್ವರಪ್ಪ ಮಾತನಾಡಿ, ದೇವೇಗೌಡರಿಗೆ ದೇವೇಗೌಡರೇ ಸರಿಸಾಟಿ. ಇವರ ಕೊಡುಗೆ ನಾಡು, ಜಿಲ್ಲೆ, ತಾಲ್ಲೂಕುಗಳಿಗೆ ಅಪಾರವಾಗಿದೆ ಎಂದರು.

ಬಿಜೆಪಿ ಮುಖಂಡ ಕೆ.ವಿ.ಎನ್. ಶಿವು ಮಾತನಾಡಿದರು. ಮುಖಂಡರಾದ ಶೇಖರಪ್ಪ, ವಕೀಲ ವಿವೇಕ್, ಜಿ.ಪಂ. ಮಾಜಿ ಸದಸ್ಯ ಅಶೋಕ್, ಕೆಂಕರೆ ಕೇಶವಮೂರ್ತಿ, ನಗರಸಭೆ ಮಾಜಿ ಅಧ್ಯಕ್ಷರಾದ ಬಿ.ಎನ್.ಗಂಗಾಧರ್, ಗಿರೀಶ್, ಬಿ.ಜಿ.ನಿರಂಜನ್, ಲಾಳನಕೆರೆ ಯೋಗೀಶ್, ಸತೀಶ್, ರಮೇಶ್, ಕುಡುಕುಂದಿ ಕುಮಾರ್, ನಗರಸಭೆ ಮಾಜಿ ಸದಸ್ಯ ಹರ್ಷವರ್ಧನ್, ಕರವೇ ನಗರ ಘಟಕದ ಅಧ್ಯಕ್ಷ ಸಂತೋಷ್ ಕುಮಾರ್, ರಾಜೇಂದ್ರ, ವಿಜಯ್ಕುಮಾರ್, ಮಂಜುನಾಥ್, ವಿನಯ್ ಕುಮಾರ್, ಶಂಕರ್ ಇದ್ದರು.

ಇದಕ್ಕೂ ಮುಂಚೆ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ, ಅವರ ಆರೋಗ್ಯ, ಆಯಸ್ಸು ಮತ್ತಷ್ಟು ವೃದ್ದಿಯಾಗಲಿ ಎಂದು ಪ್ರಾರ್ಥಿಸಿದರು. ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದರು. ಪಿ.ಪಿ.ವೃತದಲ್ಲಿ ಕೇಕ್ ಕತ್ತರಿಸಿ ಸಿಹಿ ಹಂಚಿ ಕಾರ್ಯಕರ್ತರು ಸಂಭ್ರಮಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-36-566579808

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.