ಅರಸೀಕೆರೆ: ‘ಗಾಂಜಾ ಸೇವನೆ ಮತ್ತು ಮಾರಾಟವನ್ನು ಬೇರು ಸಮೇತ ಕಿತ್ತು ಹಾಕಲು ಎಲ್ಲರ ಸಹಕಾರ ಅತಿ ಮುಖ್ಯ. ಪೋಷಕರು, ಪ್ರಾಧ್ಯಾಪಕರು ಪ್ರತಿ ದಿನ ವಿದ್ಯಾರ್ಥಿಗಳ ಮೇಲೆ ನಿಗಾ ವಹಿಸಬೇಕು’ ಎಂದು ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶ ಕಿರಣ್ ಕುಮಾರ್ ಡಿ ವಡಿಗೇರಿ ಹೇಳಿದರು.

ನಗರದ ಹೊಯ್ಸಳೇಶ್ವರ ಕಾಲೇಜು ಆವರಣದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು.

‘ಪೋಷಕರು, ಪ್ರಾಧ್ಯಾಪಕರು ಮಕ್ಕಳ ಚಟುವಟಿಕೆಗಳ ಬಗ್ಗೆ ಗಮನ ಹರಿಸಬೇಕಿದೆ. ಗಾಂಜಾ ಸೇವನೆ ಮತ್ತು ಮಾರಾಟದ ಬಗ್ಗೆ ನಿಮ್ಮ ಗಮನಕ್ಕೆ ಬಂದ ಕೂಡಲೇ ನ್ಯಾಯಾಲಯದ ಗಮನಕ್ಕೆ ತಂದರೆ ನಾವು ಅದರ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸುತ್ತೇವೆ. ಮಾಹಿತಿ ನೀಡಿದವರ ಹೆಸರನ್ನು ಗೋಪ್ಯವಾಗಿ ಇಡಲಾಗುವುದು, ಇದಕ್ಕೆ ಎಲ್ಲರ ಸಹಕಾರ ಮುಖ್ಯ’ ಎಂದರು.

‘ಸಮಾಜದ ಪ್ರತಿಯೊಬ್ಬರೂ ಜಾಗೃತರಾದರೆ ಮಾತ್ರ ಉತ್ತಮ ಸಮಾಜ ನಿರ್ಮಿಸಲು ಸಾಧ್ಯ. ಅರಸೀಕೆರೆ ನಗರದಲ್ಲಿ ಗಾಂಜಾ ಸೇವನೆ ಮತ್ತು ಮಾರಾಟ ವ್ಯಾಪಕವಾಗಿ ಹೆಚ್ಚಾಗುತ್ತಿದೆ. ತಿಂಗಳಿಗೆ ಹಲವಾರು ಪ್ರಕರಣಗಳು ನ್ಯಾಯಾಲಯದಲ್ಲಿ ದಾಖಲಾಗುತ್ತಿವೆ. ಈ ವಿಷಯ ಕಳವಳಕ್ಕೆ ಕಾರಣವಾಗಿದೆ. ನಮ್ಮ ಮುಖ್ಯ ಜವಾಬ್ದಾರಿ ಗಾಂಜಾ ಸೇವನೆ ಮತ್ತು ಮಾರಾಟವನ್ನು ಬೇರು ಸಮೇತ ಕಿತ್ತು ಹಾಕುವುದು’ ಎಂದು ಹೇಳಿದರು.

ಆಕಾಶವಾಣಿ ಕಾರ್ಯಕ್ರಮ ನಿರ್ವಹಣಾ ಅಧಿಕಾರಿ ಅರಕಲಗೂಡು ಬಿ.ಮಧುಸೂದನ್ ಮಾತನಾಡಿ, ‘ವಿದ್ಯಾರ್ಥಿಗಳು ಓದು ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಯಶಸ್ಸನ್ನು ಸಾಧಿಸಬೇಕು. ಒಳ್ಳೆಯ ವಿಚಾರ ತಿಳಿಯಲು, ಜ್ಞಾನಾರ್ಜನೆ ವೃದ್ಧಿಸಿಕೊಳ್ಳಲು ಅತಿ ಹೆಚ್ಚು ಪುಸ್ತಕಗಳನ್ನು ಓದಬೇಕು’ ಎಂದು ಹೇಳಿದರು.

ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಸಿರಿಗೆರೆ ಕೇಂದ್ರ ಆಡಳಿತ ಮಂಡಳಿಯ ಸದಸ್ಯ ಎಚ್.ಜಿ.ರೇವಣ್ಣ, ಕಾಲೇಜಿನ ಸಲಹಾ ಸಮಿತಿ ಅಧ್ಯಕ್ಷ ಜಿ.ಬಿ. ಶಶಿಧರ್, ತರಳಬಾಳು ವಿದ್ಯಾ ಸಂಸ್ಥೆಯ ಸ್ಥಳೀಯ ಸಲಹಾ ಸಮಿತಿ ಅಧ್ಯಕ್ಷ ಬಿ. ಮಹಾಲಿಂಗಪ್ಪ, ಕಲ್ಪತರು ಶಿಕ್ಷಣ ಮಹಾವಿದ್ಯಾಲಯ ಪ್ರಾಂಶುಪಾಲ ಮಲ್ಲಿಕಾರ್ಜುನ ಎಂ.ಬಿ, ಹೊಯ್ಸಳೇಶ್ವರ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎ.ಎಸ್.ವಸಂತ ಕುಮಾರ್, ಶಶಿವಾಳ ಗಂಗಾಧರ್, ನೇರ್ಲಿಗೆ ಸೋಮಶೇಖರ್, ಫಿಜಿಯೋಥೆರಪಿ ಮಧು, ಪ್ರಾಧ್ಯಾಪಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-36-1095159891

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.