ಅರಸೀಕೆರೆ: ಶ್ರೀ ರಾಮನವಮಿ ಪ್ರಯುಕ್ತ ನಗರದ ರಾಮಮಂದಿರಗಳು, ಆಂಜನೇಯ ಸ್ವಾಮಿ ದೇವಸ್ಥಾನಗಳಲ್ಲಿ ಬೆಳಿಗ್ಗೆಯಿಂದಲೇ ವಿಶೇಷ ಪೂಜೆಗಳು ನಡೆದವು. ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಹಲವೆಡೆ ಪಾನಕ , ಮಜ್ಜಿಗೆ, ಕೋಸುಂಬರಿ ವಿತರಿಸಲಾಯಿತು. ಮಧ್ಯಾಹ್ನ ಕೆಲವು ಕಡೆ ಪ್ರಸಾದ ವಿನಿಯೋಗ ನಡೆಯಿತು.

ಶ್ಯಾನುಭೋಗರ ಬೀದಿಯ ಜೈ ಶ್ರೀರಾಮ್ ತಂಡದವರು, ಬಸ್ ನಿಲ್ದಾಣದ ಬಳಿ ಕಾರ್ ಸ್ಟ್ಯಾಂಡ್ ಸಂಘ ಸೇರಿ ನಗರದ ಪ್ರಮುಖ ವೃತ್ತಗಳಲ್ಲಿ ಶ್ರೀರಾಮಚಂದ್ರರ ಭಾವಚಿತ್ರವಿಟ್ಟು ಹೂವಿನ ಹಾರ ಅರ್ಪಿಸಿ ಭಕ್ತಿ ಭಾವದಿಂದ ಪೂಜೆ ಸಲ್ಲಿಸಿ, ಪಾನಕ, ಫಲಹಾರ ವಿತರಿಸಿದರು.

ವಾಚನಾಲಯ ರಸ್ತೆಯಲ್ಲಿರುವ ಶ್ರೀರಾಮಮಂದಿರ, ಆಂಜನೇಯ ಸ್ವಾಮಿ ದೇವಸ್ಥಾನಗಳನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಶ್ರೀರಾಮಮಂದಿರದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-36-696761804

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.