ಅರಸೀಕೆರೆ: ‘ಬಸವೇಶ್ವರರ ಪ್ರತಿಮೆ ನಿರ್ಮಾಣಕ್ಕೆ ₹40 ಲಕ್ಷ ಮೀಸಲಿಟ್ಟಿರುವ ಅನುದಾನವನ್ನು ಜಿಲ್ಲಾಧಿಕಾರಿ ಬೇರೆ ಸಮುದಾಯ ಭವನ ನಿರ್ಮಿಸಲು ಆದೇಶ ಮಾಡಲಾಗಿದ್ದು, ಈ ಲೋಪ ಸರಿಪಡಿಸಿ ನ್ಯಾಯ ಒದಗಿಸಬೇಕು’ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಆಗ್ರಹಿಸಿದೆ.

ನಗರದ ತಾಲ್ಲೂಕು ಕಚೇರಿಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಹಾಗೂ ತಾಲ್ಲೂಕು ಪದಾಧಿಕಾರಿಗಳು ತಹಶೀಲ್ದಾರ್ ಎಂ.ಜಿ.ಸಂತೋಷ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭ ಮಾತನಾಡಿದ ಮಹಾಸಭಾದ ತಾಲ್ಲೂಕು ಅಧ್ಯಕ್ಷ ಶೇಖರ್ ಸಂಕೋಡನಹಳ್ಳಿ, ‘ಯಾವುದೇ ಯೋಜನೆಗೆ ಮೀಸಲಿಟ್ಟ ಹಣವನ್ನು ಬೇರೆ ಉದ್ದೇಶಗಳಿಗಾಗಿ ಬಳಸಬಾರದು. ಆದರೆ ನಗರದ ಜಗಜ್ಯೋತಿ ಬಸವೇಶ್ವರ ಪ್ರತಿಮೆ ನಿರ್ಮಾಣಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ₹40 ಲಕ್ಷ ಮೀಸಲಿರಿಸಿ ಆದೇಶ ಹೊರಡಿಸಲಾಗಿತ್ತು. ಆದರೆ ಮೀಸಲಿಟ್ಟ ಹಣವನ್ನು ಇದೀಗ ಬೇರೆ ಕಾಮಗಾರಿ ಕೈಗೆತ್ತಿಕೊಳ್ಳಲು ಹೊರಡಿಸಿರುವ ಆದೇಶ ಪರಿಷ್ಕರಿಸಿ ತಕ್ಷಣವೇ ಹಿಂಪಡೆಯಬೇಕು’ ಎಂದು ಒತ್ತಾಯಿಸಿದರು.

‘ಈ ಹಿಂದೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಸವೇಶ್ವರ ಪ್ರತಿಮೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು. ಇಲಾಖೆ ಹಣವನ್ನು ಯಾವ ಉದ್ದೇಶಕ್ಕಾಗಿ ಮೀಸಲಿಡಲಾಗಿದೆಯೋ, ಅ ಒಂದು ಯೋಜನೆಗೆ ಮಾತ್ರ ಸದುಪಯೋಗ ಮಾಡಿಕೊಳ್ಳಬೇಕು. ಆಗ ಮಾತ್ರ ಯೋಜನೆ ಯಶಸ್ವಿಯಾಗಿ ಪೂರ್ಣ ಹಾಗೂ ಅರ್ಥಪೂರ್ಣ ಕಾರ್ಯವಾಗುತ್ತದೆ’ ಎಂದು ಹೇಳಿದರು.

ಜಿಲ್ಲಾ ಉಪಾಧ್ಯಕ್ಷ ಎ.ಬಿ.ಗುರುಸಿದ್ದೇಶ್, ಮಹಿಳಾ ಘಟಕದ ಅನುರಾಧ ಕುಮಾರಸ್ವಾಮಿ, ಎಸ್.ಎಂ.ಎಸ್ ಕುಮಾರ್, ಆರ್.ಜಿ.ರಾಘವೇಂದ್ರ, ಆನಂದ್, ಚಂದ್ರಶೇಖರ್, ಶಶಿಧರ್, ,ಪವನ್ ಎ.ಪಿ, ಜಗದೀಶ್, ವಿರೂಪಾಕ್ಷಪ್ಪ, ಭರತೇಶ್, ಲೋಕೇಶ್ ನೀರಗುಂದ, ಓಂಕಾರಮೂರ್ತಿ, ಮಲ್ಲೇಶ್ , ಹೇಮಾವತಿ, ಗೌರಮ್ಮ, ಸರೋಜಾ, ಪ್ರೇಮಾ ಗಿರೀಶ್, ಎ.ಎಲ್.ಮೋಹನ್ ಕುಮಾರ್, ಪಂಚಾಕ್ಷರಿ, ಗಗನ್, ನಂಜುಂಡ ಸ್ವಾಮಿ, ಲಿಂಗರಾಜು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-36-851950629

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.