ಅರಸೀಕೆರೆ: ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಅಡಿಯಲ್ಲಿ ಸರ್ಕಾರಿ ಶಾಲೆಗಳ ವಿಲೀನಕ್ಕೆ ವಿರೋಧ ವ್ಯಕ್ತಪಡಿಸಿ, ಎಐಡಿಎಸ್ಒ ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ನೇತೃತ್ವದಲ್ಲಿ ಅರಸೀಕೆರೆಯ ಬಿಇಒ ಕಚೇರಿ ಮುಂಭಾಗ ಪ್ರತಿಭಟನೆ ಮತ್ತು ಪ್ರತಿರೋಧ ಸಮಾವೇಶ ನಡೆಯಿತು.

ತಾಲ್ಲೂಕಿನ ಬಾಣವಾರ, ಕುರವಂಕ, ಡಿ.ಎಂ. ಕುರ್ಕೆ, ಜಾವಗಲ್ ಹಾಗೂ ಚಿಂದೇನಹಳ್ಳಿ ಗೇಟ್ ಪ್ರದೇಶಗಳಲ್ಲಿ ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ಸ್ಥಾಪಿಸಿ, ಸುತ್ತಲಿನ 50ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲು ಸರ್ಕಾರ ಅಧಿಕೃತ ಪಟ್ಟಿ ಬಿಡುಗಡೆ ಮಾಡಿರುವುದನ್ನು ಪ್ರತಿಭಟನಕಾರರು ಖಂಡಿಸಿದರು.

ಎಐಡಿಎಸ್ಒ ರಾಜ್ಯ ಘಟಕದ ಖಜಾಂಚಿ ಸುಭಾಷ್ ಬೆಟ್ಟದಕೊಪ್ಪ ಮಾತನಾಡಿ, ರಾಜ್ಯ ಸರ್ಕಾರದ ಆದೇಶದ ಪ್ರಕಾರ ಗ್ರಾಮ ಪಂಚಾಯಿತಿಗೆ ಒಂದೇ ಸರ್ಕಾರಿ ಶಾಲೆ ಉಳಿಸಿ, ಸಾವಿರಾರು ಶಾಲೆಗಳನ್ನು ಮುಚ್ಚುವ ಸಂಚು ನಡೆಯುತ್ತಿದೆ. ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ 5 ಕಿ.ಮೀ. ವ್ಯಾಪ್ತಿಯ ಸರ್ಕಾರಿ ಶಾಲೆಗಳನ್ನು ಹಂತ ಹಂತವಾಗಿ ನಾಶ ಮಾಡಲು ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು.

ರಾಜ್ಯ ಸರ್ಕಾರ ಶಿಕ್ಷಣಕ್ಕೆ ಗ್ಯಾರಂಟಿ ನೀಡುವುದಾಗಿ ಹೇಳುತ್ತಿದೆಯಾದರೂ, ಇನ್ನೊಂದೆಡೆ ಸರ್ಕಾರಿ ಶಾಲೆಗಳನ್ನು ಮುಚ್ಚುವ ಮೂಲಕ ಜನರಿಗೆ ಮೋಸ ಮಾಡುತ್ತಿದೆ. ಒಂದನೇ ತರಗತಿಯಿಂದಲೇ ಆಂಗ್ಲ ಮಾಧ್ಯಮ ಆರಂಭಿಸುವ ಮೂಲಕ ಕನ್ನಡ ಶಾಲೆಗಳ ಅಸ್ತಿತ್ವಕ್ಕೂ ಧಕ್ಕೆ ತರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ರಾಜ್ಯ ಘಟಕದ ಉಪಾಧ್ಯಕ್ಷ ವಿ.ಎನ್. ರಾಜಶೇಖರ್ ಮಾತನಾಡಿ, ರಾಜ್ಯದಲ್ಲಿ ಈಗಾಗಲೇ ಸಾವಿರಾರು ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಅನೇಕ ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯಗಳೇ ಇಲ್ಲ. ಶಾಲೆಗಳನ್ನು ಬಲಪಡಿಸುವ ಬದಲು ಸರ್ಕಾರ ಅವುಗಳನ್ನು ಸೊರಗಲು ಬಿಡುತ್ತಿದೆ ಎಂದು ಟೀಕಿಸಿದರು.

ಸಾಮಾಜಿಕ ಹೋರಾಟಗಾರ ಉಗ್ರ ನರಸಿಂಹೇಗೌಡ ಮಾತನಾಡಿ, ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳನ್ನು ಮುಚ್ಚಿದರೆ ಶ್ರಮಜೀವಿಗಳ ಮಕ್ಕಳಿಗೆ ಶಿಕ್ಷಣ ಸಿಗದಂತಾಗುತ್ತದೆ. ಜನರ ತೆರಿಗೆ ಹಣದಿಂದ ಸರ್ಕಾರ ಸರ್ಕಾರಿ ಶಾಲೆಗಳನ್ನು ಬಲಪಡಿಸಬೇಕು ಎಂದು ಆಗ್ರಹಿಸಿದರು.

ಬಿಇಒ ಮೋಹನ್ ಕುಮಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದ ಪ್ರತಿಭಟನಕಾರರು, ನಮ್ಮೂರ ಸರ್ಕಾರಿ ಶಾಲೆಗಳನ್ನು ಮುಚ್ಚಬೇಡಿ ಎಂದು ಒತ್ತಾಯಿಸಿದರು.

ಎಐಡಿಎಸ್ಒ ಜಿಲ್ಲಾ ಘಟಕದ ಅಧ್ಯಕ್ಷೆ ಚೈತ್ರಾ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಸುಷ್ಮಾ, ಉಪಾಧ್ಯಕ್ಷ ಅಭಿಷೇಕ್ ಸೇರಿದಂತೆ ವಿವಿಧ ಹಳ್ಳಿಗಳ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಸದಸ್ಯರು, 25ಕ್ಕೂ ಹೆಚ್ಚು ಹಳ್ಳಿಗಳಿಂದ ಸುಮಾರು 300ಕ್ಕೂ ಅಧಿಕ ಪೋಷಕರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-36-640758050

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.