ಅರಸೀಕೆರೆ: ತಾಲ್ಲೂಕಿನ ಹಾರನಹಳ್ಳಿ ಕೋಡಿಮಠದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಮಹದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ದೊರೆತಿದೆ.

ಜಾತ್ರಾ ಮಹೋತ್ಸವದ ಮೊದಲ ದಿನವಾದ ಬುಧವಾರ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಮಠದ ಸಂಪ್ರದಾಯದಂತೆ ಸಾವಿರಾರು ಮುತ್ತೈದೆಯರಿಗೆ ಉಡಿ ತುಂಬಿ, ಮಡಿಲಕ್ಕಿ, ಕುಂಕುಮ ನೀಡಿ, ಬಾಗಿನ ಕೊಟ್ಟು ಸತ್ಕರಿಸಲಾಯಿತು.

ಜಾತಿ, ಮತ, ಪಂಥ ಭೇದವಿಲ್ಲದೇ ವಿವಿಧೆಡೆಗಳಿಂದ ಬಂದಿದ್ದ ಸಾವಿರಾರು ಮಹಿಳೆಯರಿಗೆ, ಅರಿಶಿನ ಕುಂಕುಮದೊಂದಿಗೆ ಹೂ, ಬಳೆ ಹಾಗೂ ಸೀರೆಯನ್ನು ನೀಡುವ ಮೂಲಕ ಮಠದ ಪೀಠಾಧ್ಯಕ್ಷ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಗಳು, ಹೆಣ್ಣು ಮಕ್ಕಳಿಗೆ ಮಠವು ಮೊದಲಿನಿಂದಲೂ ಗೌರವ ನೀಡುತ್ತ ಬಂದಿದ್ದು, ಪೂಜ್ಯ ಭಾವನೆಯಿಂದ ಕಾಣಲಾಗುತ್ತಿದೆ ಎಂದರು.

ಮಠಕ್ಕೆ ಬರುವ ಪ್ರತಿ ಹೆಣ್ಣು ಮಗಳೂ ಪಾರ್ವತಿ ಸಮಾನ ಎಂಬುದು ಮಠದ ನಂಬಿಕೆ. ಮುತ್ತೈದೆಯರಿಗೆ ಬಾಗಿನ ನೀಡುವ ಮಠದ ಸಂಪ್ರದಾಯ ಒಂದೆಡೆಯಾದರೆ, ಅವರನ್ನು ಗೌರವಿಸುವ ಮೂಲಕ ಸಮಾಜದಲ್ಲಿ ಹೆಣ್ಣು ಮಕ್ಕಳನ್ನೂ ಮುನ್ನೆಲೆಗೆ ತರುವುದು ಹಾಗೂ ಪುರುಷರಿಗೆ ಸಮಾನಳು ಎಂದು ಸಾರುವುದು ಕಾರ್ಯಕ್ರಮದ ಮುಖ್ಯ ಆಶಯ ಹಾಗೂ ಉದ್ದೇಶ ಎಂದು ನುಡಿದರು.

ಮಠದ ಉತ್ತರಾಧಿಕಾರಿ ಚೇತನ್ ಮರಿದೇವರು ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಜರಿದ್ದರು. ಮಧ್ಯಾಹ್ನ ಸಾಮೂಹಿಕವಾಗಿ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ಗುರುವಾರ ಕೋಡಿಮಠ ಹಾಗೂ ಹಾರನಹಳ್ಳಿ ಗ್ರಾಮಗಳನ್ನು ಪ್ರವೇಶಸುವ ಸ್ವಾಮೀಜಿ, ಮನೆ ಮನೆಗೆ ತೆರಳಿ ಭಿಕ್ಷಾಟನೆ ಮಾಡುವರು. ಶ್ರೀಗಳನ್ನು ಸ್ವಾಗತಿಸಲು ಈಗಾಗಲೇ ಕೋಡಿಮಠ ಮತ್ತು ಹಾರನಹಳ್ಳಿ ಜನರು ರಸ್ತೆ ಮತ್ತಿತರ ಕಡೆಗಳಲ್ಲಿ ತಳಿರು-ತೋರಣಗಳಿಂದ ಸಿಂಗಾರ ಮಾಡಿದ್ದಾರೆ. ಶ್ರೀಗಳ ಆಗಮನಕ್ಕೆ ಗ್ರಾಮಸ್ಥರು ಕಾಯುತ್ತಿದ್ದಾರೆ. ಹಬ್ಬದ ವಾತಾವರಣ ನಿರ್ಮಾಣ ಆಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260305-36-1066436037

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.