ಅರಸೀಕೆರೆ: ತಾಲ್ಲೂಕಿನ ಸುಕ್ಷೇತ್ರ ಮಾಡಾಳು ಗ್ರಾಮದಲ್ಲಿ 165 ವರ್ಷಗಳ ಇತಿಹಾಸ ಹೊಂದಿರುವ ಮೂಲಸ್ಥಾನ ಸ್ವರ್ಣ ಗೌರಮ್ಮ ದೇವಾಲಯದ ನೂತನ ಕಟ್ಟಡವು ಶ್ರಾವಣ ಪಂಚಮಿಗೆ ಲೋಕಾರ್ಪಣೆ ನೆರವೇರಲಿದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ಕಣಕಟ್ಟೆ ಹೋಬಳಿಯ ಮಾಡಾಳು ಗ್ರಾಮದಲ್ಲಿ ಸುಮಾರು ₹1.50 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ನೂತನ ದೇವಾಲಯದ ಕಾಮಗಾರಿ ವೀಕ್ಷಿಸಿ ಮಾತನಾಡಿದರು. ‘ಲಕ್ಷಾಂತರ ಭಕ್ತರ ಇಷ್ಟಾರ್ಥಗಳ್ನು ನೆರವೇರಿಸುತ್ತಿರುವ ಮೂಲಸ್ಥಾನ ಸ್ವರ್ಣ ಗೌರಮ್ಮ ದೇವಾಲಯ ಶಕ್ತಿ ದೇವತೆಯಾಗಿ ಕಂಗೊಳಿಸುತ್ತಿದೆ. ಸರ್ಕಾರದ ಯಾವುದೇ ಸಹಾಯವಿಲ್ಲದೆ ಸ್ವತಃ ಕೋಡಿಮಠ ಹಾಗೂ ಭಕ್ತರ ಸಹಕಾರದಿಂದ ಸಂಪೂರ್ಣ ವೆಚ್ಚವನ್ನು ಬರಿಸಲಾಗುತ್ತಿದೆ’ ಎಂದರು.

ಗೌರಮ್ಮ ದೇವಿ ಸೇವಾ ಸಮಿತಿ ಅಧ್ಯಕ್ಷ ನಟರಾಜು, ಗೌರವಾಧ್ಯಕ್ಷ ಮಲ್ಲಿಕಾರ್ಜುನಪ್ಪ, ಕೋಡಿಮಠದ ಏಜೆಂಟ್ ಮಹದೇವಪ್ಪ, ಕಿತ್ತನಕೆರೆ ಶೆಟ್ರು ವಂಶಸ್ಥರು, ಮರ್ಚೆಂಟ್ ಕ್ಲಬ್ ಅಧ್ಯಕ್ಷ ಮಲ್ಲಿಕಾರ್ಜುನಪ್ಪ, ಡಿ.ಎಂ.ಕುರ್ಕೆಯ ನಂಜುಂಡಶೆಟ್ರು, ಮಡಿವಾಳ ಸಮಾಜದ ಮುಖಂಡ ವೀರಭದ್ರಪ್ಪ, ಎಂ.ಸಿ.ನಟರಾಜ್, ಎಂ.ಜಿ.ಶಿವಣ್ಣ, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಟಿ.ಲೋಕೇಶ್, ಮುಖಂಡರಾದ ಚಂದ್ರಪ್ರ, ತಿಮ್ಮಯ್ಯ, ದಾಸಪ್ಪ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-36-1445452422

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.