ಅರಸೀಕೆರೆ: ಎತ್ತಿನಹೊಳೆ ಯೋಜನೆಯಿಂದ ಕ್ಷೇತ್ರದ ಎಲ್ಲ ಕೆರೆಗಳಿಗೆ ನೀರು ಹರಿಸಲು ವಿಳಂಬವಾಗಿತ್ತು. ಈಗ ಸಮಸ್ಯೆ ಬಗೆಹರಿದಿದ್ದು, ಯೋಜನೆಯ ಕಾಮಗಾರಿ ಮುಗಿಸುವ ನಿಟ್ಟಿನಲ್ಲಿ ಗಮನಹರಿಸಿ ನೀರು ಹರಿಸಲಾಗುವುದು ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು.

ತಾಲ್ಲೂಕಿನ ಕಸಬಾ ಹೋಬಳಿಯ ನಾರಾಯಣಘಟ್ಟ ಬಳಿ ಸಣ್ಣ ನೀರಾವರಿ ಇಲಾಖೆಯ ವತಿಯಿಂದ ₹ 75 ಲಕ್ಷ ವೆಚ್ಚದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ ಕಾಮಗಾರಿಗೆ ಶನಿವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

‘ಮಳೆಯಿಲ್ಲದೆ ಇಂದು ಅಂತರ್ಜಲ ಮಟ್ಟ ಕುಸಿಯುತ್ತಿದೆ. ಇದರಿಂದ ಕೊಳವೆಬಾವಿಗಳಲ್ಲಿ ನೀರು ಕಡಿಮೆ ಆಗಿತ್ತು. ಮಳೆಗಾಲದಲ್ಲಿ ಬಿದ್ದ ನೀರನ್ನು ಸಂಗ್ರಹ ಮಾಡುವುದರಿಂದ ಅಂತರ್ಜಲ ಮಟ್ಟ ಹೆಚ್ಚುತ್ತದೆ ಎಂದು ಸಾವಿರಾರು ಚೆಕ್ ಡ್ಯಾಂ, ಬ್ರಿಡ್ಜ್ ಹಾಗೂ ಬ್ಯಾರೇಜ್ಗಳನ್ನು ನಿರ್ಮಿಸಿದ್ದೇನೆ’ ಎಂದರು.

‘ಇದರಿಂದ ರೈತರ ಕೊಳವೆಬಾವಿಗಳಲ್ಲಿ ವರ್ಷವಿಡೀ ನೀರು ಇದ್ದು ಅಂತರ್ಜಲ ಮಟ್ಟ ಹೆಚ್ಚಾಗಿ ಇರುವುದರಿಂದ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುತ್ತದೆ. ಗ್ರಾಮೀಣ ಭಾಗಗಳಲ್ಲಿ ನೀರಿನ ವ್ಯವಸ್ಥೆ ಮಾಡುವುದರಿಂದ ಕೃಷಿಗೆ ಅನುಕೂಲವಾಗಲಿದೆ’ ಎಂದು ಹೇಳಿದರು.

‘ಸೋಲಾರ್ ವಿದ್ಯುತ್ಗೂ ಆದ್ಯತೆ ನೀಡಲಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಅಭಿವೃದ್ಧಿ ಕಾರ್ಯಗಳೇ ನನ್ನ ಮೂಲಮಂತ್ರ’ ಎಂದರು.

ಮುಖಂಡರಾದ ಕೆಲ್ಲೆಂಗೆರೆ ಗುರುಮೂರ್ತಿ, ಕುಮಾರ, ಚನ್ನಬಸಪ್ಪ, ಚಿದಾನಂದ, ಯತೀಶ ನಾರಾಯಣಘಟ್ಟಹಳ್ಳಿಯ ಚಂದ್ರು, ವಸಂತ, ರವಿ, ನಾಗೇನಹಳ್ಳಿ ದಯಾನಂದ, ಎ.ಇ.ಇ ಸುಂದರರಾಜ್, ಗುತ್ತಿಗೆದಾರ ಶ್ರೀನಿವಾಸ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260322-36-45470062

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.