ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ–ಜೆಡಿಎಸ್‌ ವಿಲೀನಗೊಂಡರೆ ರಾಜಕೀಯ ನಿವೃತ್ತಿ: ರೇವಣ್ಣ

ಅರವಿಂದ ಲಿಂಬಾವಳಿ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದ ಮಾಜಿ ಸಚಿವ
Last Updated 21 ಡಿಸೆಂಬರ್ 2020, 14:41 IST
ಅಕ್ಷರ ಗಾತ್ರ

ಹಾಸನ: ಜೆಡಿಎಸ್ ಪಕ್ಷವು ಬಿಜೆಪಿಯಲ್ಲಿ ಯಾವುದೇ ಕಾರಣಕ್ಕೂ ವಿಲೀನಗೊಳ್ಳುವುದಿಲ್ಲ. ಸುಳ್ಳು ಸುದ್ದಿ ಹರಡಿರುವ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಅರವಿಂದ ಲಿಂಬಾವಳಿ ಅವರು ಜನರ ಕ್ಷಮೆಯಾಚಿಸಬೇಕು ಎಂದು ಶಾಸಕ ಎಚ್‌.ಡಿ.ರೇವಣ್ಣ ಆಗ್ರಹಿಸಿದರು.

ಗ್ರಾಮ ಪಂಚಾಯಿತಿ ಚುನಾವಣೆ ಸಂದರ್ಭದಲ್ಲಿಯೇ ಈ ರೀತಿ ಅಪಪ್ರಚಾರ ಮಾಡಲಾಗುತ್ತಿದೆ. ಈ ರೀತಿ ಹೇಳಿಕೆ ನೀಡುವುದು ಅವರಿಗೂ ಶೋಭೆ ತರುವುದಿಲ್ಲ. ಲಿಂಬಾವಳಿ ಉಪಾಧ್ಯಕ್ಷರಾಗಿರಲು ಅರ್ಹರಲ್ಲ. ಬಿಜೆಪಿ ಅಥವಾ ಕಾಂಗ್ರೆಸ್‌ ಜತೆ ಹೊಂದಾಣಿಕೆ ಪ್ರಶ್ನೆಯೇ ಇಲ್ಲ. ಈಗಾಗಲೇ ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡ, ಎಚ್‌.ಡಿ.ಕುಮಾರಸ್ವಾಮಿ ಅವರ ಜತೆ ಮಾತನಾಡಿದ್ದೇನೆ. ಅಂತಹ ಪರಿಸ್ಥಿತಿ ಬಂದರೆ ರಾಜಕೀಯ ನಿವೃತ್ತಿ ಹೊಂದುತ್ತೇನೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಸ್ವಂತ ಬಲದಿಂದ ಜೆಡಿಎಸ್‌ ಸ್ಪರ್ಧಿಸಲಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಜೆಡಿಎಸ್‌ನಿಂದ ಹೊರ ಹೋಗುವವರು ಹೋಗಲಿ. ಕಷ್ಟದ ಸಂದರ್ಭದಲ್ಲಿ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರಿಂದ ಆಶ್ರಯ ಪಡೆದು ಅವರಿಗೆ ಚೂರಿ ಹಾಕುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT