ಬೆಂಗಳೂರು: ‘ಹಾಸನ ಜಿಲ್ಲೆಯ ಯಸಳೂರು ವಲಯದಲ್ಲಿ 2023ರ ಡಿ. 4 ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ ಮೃತಪಟ್ಟ ಅರ್ಜುನ ಆನೆಯ ಸಮಾಧಿ ಸ್ಥಳದಲ್ಲಿ ನಿರ್ಮಿಸಿರುವ ಸ್ಮಾರಕವನ್ನು ಇದೇ 6 ರಂದು ಉದ್ಘಾಟಿಸಲಾಗುವುದು’ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

‘ದಸರಾ ಮಹೋತ್ಸವದಲ್ಲಿ ಎಂಟು ಬಾರಿ ಚಿನ್ನದ ಅಂಬಾರಿ ಹೊತ್ತು ಗಾಂಭೀರ್ಯದಿಂದ ಹೆಜ್ಜೆ ಹಾಕಿ, ಜನರ ಪ್ರೀತಿಗೆ ಪಾತ್ರನಾಗಿದ್ದ ಅರ್ಜುನ ಆನೆಯ ಸಾವು ಇಲಾಖೆಗೆ ದೊಡ್ಡ ನಷ್ಟವಾಗಿದ್ದು, ಸಮಾಧಿ ಸ್ಥಳದಲ್ಲಿ ಮತ್ತು ನಾಗರಹೊಳೆಯ ಬಳ್ಳೆಯಲ್ಲಿ ಸ್ಮಾರಕ ನಿರ್ಮಿಸಲಾಗುವುದು’ ಎಂದು ಈ ಹಿಂದೆಯೇ ಖಂಡ್ರೆ ತಿಳಿಸಿದ್ದರು.

‘ಈಗಾಗಲೇ ಬಳ್ಳೆ ಶಿಬಿರದಲ್ಲಿ ಅರ್ಜುನನ ಹಿರಿಮೆ, ಸಾಹಸ ಗಾಥೆಗಳನ್ನು ಇಂದಿನ ಮತ್ತು ಮುಂದಿನ ಪೀಳಿಗೆಗೂ ತಿಳಿಸುವ ರೀತಿಯಲ್ಲಿ ಸ್ಮಾರಕ ಅನಾವರಣ ಮಾಡಲಾಗಿದೆ’ ಎಂದು ಅವರು ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-51-1128134949

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.