ಹೆತ್ತೂರು: ಪ್ರವಾಸಿಗರ ಸುರಕ್ಷತೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು, ಹುತಾತ್ಮ ಅರ್ಜುನನ ಸ್ಮಾರಕ ಸ್ಥಳಕ್ಕೆ ಹೋಗಲು ಈಗ ನಿರ್ಮಿಸಿರುವ ಕಚ್ಚಾ ರಸ್ತೆಯಲ್ಲಿ ಪಕ್ಕಾ ರಸ್ತೆ ಮಾಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದರು.

ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಪ್ರತಿಮೆ ಉದ್ಘಾಟಿಸಿದ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸ್ಮಾರಕ ಪ್ರದೇಶ ಆನೆ ಸಂಚರಿಸುವ ಸ್ಥಳವಾಗಿದ್ದು, ಇಲ್ಲಿಗೆ ಬರುವ ಪ್ರವಾಸಿಗರ ಸುರಕ್ಷತೆಯೂ ನಮಗೆ ಪ್ರಥಮ ಆದ್ಯತೆಯಾಗಿದೆ ಎಂದರು.

ಜಾಗತಿಕ ತಾಪಮಾನ ಏರಿಕೆಯಿಂದ ಇಂದು ಋತುಮಾನಗಳೇ ಬದಲಾಗಿವೆ. ಒಂದು ತಿಂಗಳಲ್ಲಿ ಬೀಳುವ ಮಳೆ ಒಂದು ವಾರದಲ್ಲಿ ಬೀಳುತ್ತಿದೆ. ಒಂದು ವಾರದ ಮಳೆ ಒಂದು ದಿನದಲ್ಲಿ, ಒಂದು ದಿನವಿಡೀ ಬೀಳುವ ಮಳೆ ಒಂದು ಗಂಟೆಯಲ್ಲಿ ಬೀಳುತ್ತಿದ್ದು, ಇದರಿಂದ ಅನಾಹುತಗಳು ಸಂಭವಿಸುತ್ತಿವೆ. ಹೀಗಾಗಿ ಪ್ರಕೃತಿ ಪರಿಸರ ಉಳಿಸುವ ಕಾರ್ಯವನ್ನು ಎಲ್ಲರೂ ಮಾಡಬೇಕು ಎಂದರು.

ಹಾಸನ, ಚಿಕ್ಕಮಗಳೂರು, ಕೊಡಗು ಭಾಗದಲ್ಲಿ ನೂರಾರು ಆನೆಗಳು ಅರಣ್ಯದ ಹೊರಗೆ ಇದ್ದು, ತೋಟದ ಆನೆಗಳಾಗಿವೆ. ಈ ಆನೆಗಳು ತೆನೆ ಒಡೆಯುವ ಸಮಯದಲ್ಲಿ ಹೆಚ್ಚಾಗಿ ನಾಡಿಗೆ ಬರುತ್ತವೆ. ಆಗ ಸಂಘರ್ಷ ಹೆಚ್ಚುತ್ತದೆ ಎಂದು ತಜ್ಞರು ಹೇಳುತ್ತಾರೆ ಎಂದರು.

1972ರಲ್ಲಿ ಬಂಡೀಪುರದಲ್ಲಿ ಕೇವಲ 110 ಆನೆ ಇದ್ದವು. ಇಂದು 1,100 ಆನೆ ಇವೆ. ರಾಜ್ಯದಲ್ಲಿ 6,395 ಆನೆಗಳಿವೆ. ಹೀಗಾಗಿ 1970ರ ದಶಕದಲ್ಲಿ ಕುಟುಂಬ ಯೋಜನೆ ಜಾರಿಗೆ ತಂದು ನಾವಿಬ್ಬರು, ನಮಗಿಬ್ಬರು ಎಂಬ ಸಂದೇಶವನ್ನು ಜನರಿಗೆ ತಲುಪಿಸಿದ ರೀತಿಯಲ್ಲೇ ಕೆಲವು ಆಯ್ದ ಪ್ರದೇಶದಲ್ಲಿ, ಆಯ್ದ ವನ್ಯಜೀವಿಗಳಿಗೆ ಸಂತಾನ ನಿಯಂತ್ರಣ ಮಾಡುವ ಅಗತ್ಯವಿದೆ, ಈ ಬಗ್ಗೆ ಚರ್ಚೆ ಆಗಬೇಕು ಎಂಬ ಹೇಳಿಕೆ ನೀಡಿದ್ದೇನೆ. ಈ ಬಗ್ಗೆ ಜನಾಭಿಪ್ರಾಯ ಮೂಡಬೇಕು ಎಂದರು.

ಕಾಡಿನ ಹೊರಗೆ ಇರುವ ಆನೆಗಳನ್ನು ಒಂದು ಕಡೆ ಕಲೆ ಹಾಕಲು ಆನೆ ಧಾಮ ಮಾಡಲು ಸರ್ಕಾರ ತೀರ್ಮಾನಿಸಿದೆ. ಇದಕ್ಕೆ 2 ಸಾವಿರ ಹೆಕ್ಟೇರ್ ಜಮೀನು ಗುರುತಿಸಲಾಗಿದೆ. ಶೀಘ್ರವೇ ಈ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದರು.

ವನ್ಯಜೀವಿ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ಈ ಹಿಂದೆ ₹15 ಲಕ್ಷ ಪರಿಹಾರ ನೀಡಲಾಗುತ್ತಿತ್ತು. ಅದನ್ನು ₹20 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಪರಿಹಾರದ ಮೊತ್ತವನ್ನು ಕೆಲವೇ ದಿನಗಳಲ್ಲಿ ಪಾವತಿಸಲು ವ್ಯವಸ್ಥೆ ಮಾಡಲಾಗಿದೆ. ನಾವು ನೀಡುವ ಪರಿಹಾರದಿಂದ ಹೋದ ಜೀವವನ್ನು ಮರಳಿ ತರಲು ಸಾಧ್ಯವಿಲ್ಲ. ಆದರೆ ಆ ಕುಟುಂಬಕ್ಕೆ ಬದುಕು ಕಟ್ಟಿಕೊಳ್ಳಲು ಆಸರೆ ಆಗಬಹುದು ಎಂದರು.

ವನ್ಯಜೀವಿಗಳಿಂದ ಆಗುವ ಬೆಳೆ ಹಾನಿ ಪರಿಹಾರವನ್ನೂ ವಿಳಂಬವಿಲ್ಲದೇ ಪಾವತಿಸಲಾಗುತ್ತಿದೆ. ರೈತರ ಪರವಾಗಿ ಸರ್ಕಾರವಿದ್ದು, ಪರಿಹಾರದ ಮೊತ್ತ ಹೆಚ್ಚಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ಸಫಾರಿಯಿಂದ ನಮ್ಮ ಇಲಾಖೆಯ ವಿವಿಧ ಪ್ರತಿಷ್ಠಾನಕ್ಕೆ ಬರುವ ಆದಾಯದಲ್ಲಿ ಶೇ 33ರಷ್ಟು ಹಣವನ್ನು ಕಾಡಿನಂಚಿನ ಜನರ ಜೀವನಮಟ್ಟ ಉತ್ತಮ ಪಡಿಸುವುದಕ್ಕೆ ವಿನಿಯೋಗಿಸಲು ಸೂಚಿಸಲಾಗಿದ್ದು, ಕೊಡಗಿನಲ್ಲಿ ಫಲಾನುಭವಿಗಳಿಗೆ ಹೊಲಿಗೆಯಂತ್ರ, ಜೇನು ಪೆಟ್ಟಿಗೆಗಳನ್ನು ನೀಡಿದ್ದಾಗಿ ತಿಳಿಸಿದರು.

ಅರಣ್ಯ ಸಚಿವನಾಗಿ ಹಾಸನಕ್ಕೆ 8 ಬಾರಿ ಬಂದಿದ್ದು, ಜಿಲ್ಲೆಯ ಜನರ ಸಮಸ್ಯೆ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-51-1505258333

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.