ಶುಕ್ರವಾರ, ಅಕ್ಟೋಬರ್ 23, 2020
21 °C

ಮನೆಗಳ್ಳನ ಬಂಧನ: ಚಿನ್ನಾಭರಣ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ಮನೆಗಳ್ಳನನ್ನು ಬಂಧಿಸಿರುವ ನಗರ ಠಾಣೆ ಪೊಲೀಸರು, ₹1,50 ಲಕ್ಷ ಮೌಲ್ಯದ ಚಿನ್ನಾಭರಣ
ವಶಪಡಿಸಿಕೊಂಡಿದ್ದಾರೆ.

ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ನೀಲಗುಂದ ಗ್ರಾಮದ ಗೋಪಿಕೃಷ್ಣ (20) ಬಂಧಿತ ವ್ಯಕ್ತಿ. ನಗರ
ನಿವಾಸಿ ಹೇಮಲತಾ ಅವರು ಕೊಡ್ಲಿಪೇಟೆ ಸಮೀಪದ ದೊಡ್ಡ ಬಂಡಾರ ಗ್ರಾಮಕ್ಕೆ ಹೋಗಿದ್ದ ವೇಳೆ ಮನೆಯ ಬಾಗಿಲು ಮುರಿದು ಬೀರುವಿನಲ್ಲಿದ್ದ ಚಿನ್ನಾಭರಣ ಕಳ್ಳತನ ಮಾಡಲಾಗಿತ್ತು.

ಅ.10 ರಂದು ನಗರದ ಬೇಲೂರು ರಸ್ತೆಯ ವಿಜಯನಗರ ಬಸ್‌ ನಿಲ್ದಾಣ ಬಳಿ ಅನುಮಾನಸ್ಪದವಾಗಿ ನಿಂತಿದ್ದ
ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ.
ಆರೋಪಿ ಪತ್ತೆ ಕಾರ್ಯದಲ್ಲಿ ನಗರ ವೃತ್ತದ ಸರ್ಕಲ್‌ ಇನ್‌ಸ್ಪೆಕ್ಟರ್‌ ಕೃಷ್ಣರಾಜು, ಪಿಎಸ್‌ಐ ಮತ್ತು ಸಿಬ್ಬಂದಿ
ಶ್ರಮಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.