ಅರಸೀಕೆರೆ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ಮಕ್ಕಳ ಇಂಗ್ಲಿಷ್ ಕಲಿಕೆಗೆ ಸಹಕಾರಿ ಆಗಲೆಂದು ಶಿಕ್ಷಣ ಇಲಾಖೆಯು ಪ್ರತಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಈ ಇಂಗ್ಲಿಷ್ ಹಬ್ಬ ಆಯೋಜಿಸುತ್ತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ನಗರ ವಲಯದ ಶಿಕ್ಷಣ ಸಂಯೋಜಕ ಮಲ್ಲೇಶ್ ತಿಳಿಸಿದರು.

ನಗರದ ಪ್ರವಾಸಿ ಮಂದಿರದ ಮುಂಭಾಗದ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸೋಮವಾರ ನಡೆದ ಇಂಗ್ಲಿಷ್ ಹಬ್ಬ ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡ ಭಾಷೆಯ ಕಲಿಕೆ ಕಡ್ಡಾಯವಾದರೂ, ಜೊತೆಗೆ ಇಂಗ್ಲಿಷ್ ಭಾಷೆಯನ್ನು ಪಠ್ಯಕ್ರಮದಲ್ಲಿ ಕಲಿಸಲಾಗುತ್ತದೆ. ಇತ್ತೀಚೆಗೆ ಶಿಕ್ಷಣ ಇಲಾಖೆಯು ಖಾಸಗಿ ಶಾಲೆಗಳ ವಿದ್ಯಾರ್ಥಿಗಳಂತೆ ಬಡ ವಿದ್ಯಾರ್ಥಿಗಳು ಓದುತ್ತಿರುವ ಸರ್ಕಾರಿ ಶಾಲೆಗಳಲ್ಲೂ ಆಂಗ್ಲ ಭಾಷೆಯ ಪರಿಣಾಮಕಾರಿ ಕಲಿಕೆಗೆ ಹೆಚ್ಚು ಒತ್ತು ನೀಡುತ್ತಿದ್ದು, ಅದಕ್ಕಾಗಿ ಇಂಗ್ಲಿಷ್ ಹಬ್ಬ ಎಂಬ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಸರ್ಕಾರಿ ಶಾಲೆಯಲ್ಲಿ ಕನ್ನಡ, ಇಂಗ್ಲಿಷ್, ಹಿಂದಿ ಮತ್ತು ಉರ್ದು ಭಾಷೆಗಳನ್ನು ಕಲಿಯಲು ಅವಕಾಶ ಇದೆ. ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರೊಂದಿಗೆ ಪೋಷಕರು ಸಹಕರಿಸುವ ಮೂಲಕ ಶಾಲಾ ಆವರಣದ ಸ್ವಚ್ಛತೆ ಹಾಗೂ ಶಾಲೆಯ ಕಟ್ಟಡ ಮತ್ತು ವಸ್ತುಗಳ ಸಂರಕ್ಷಣೆಗೆ ಮುಂದಾಗಬೇಕು. ಶಾಲೆಗಳ ಕಟ್ಟಡ ಅಥವಾ ವಸ್ತುಗಳಿಗೆ ಹಾನಿ ಆಗದಂತೆ ಎಚ್ಚರ ವಹಿಸಬೇಕು. ಮುಂದಿನ ಇಂಗ್ಲಿಷ್ ಕಲಿಕಾ ಹಬ್ಬದ ವೇಳೆಗೆ ಇನ್ನಷ್ಟು ಸಿದ್ಧತೆಯೊಂದಿಗೆ ಕಾರ್ಯಕ್ರಮ ಆಯೋಜಿಸಿದರೆ ಪರಿಣಾಮಕಾರಿಯಾಗಿ ಮೂಡಿಬರಲಿದೆ. ಈ ನಿಟ್ಟಿನಲ್ಲಿ ಯೋಚಿಸಬೇಕು ಎಂದರು.

ಶಾಲೆಯ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸಬೀರ್ ಪಾಷಾ ಮಾತನಾಡಿ, ಸರ್ಕಾರ ವಿದ್ಯಾರ್ಥಿಗಳ ಕಲಿಕೆಗೆ ಒತ್ತು ನೀಡುವ ಮೂಲಕ ಸಕಲ ವ್ಯವಸ್ಥೆ ಕಲ್ಪಿಸಿದೆ. ವಿದ್ಯಾರ್ಥಿಗಳು ಹಾಗೂ ಪೋಷಕರು ಕಲಿಕೆಯ ಜೊತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಮಕ್ಕಳು ಹೆಚ್ಚೆಚ್ಚು ತೊಡಗುವಂತೆ ಪ್ರೋತ್ಸಾಹಿಸಬೇಕು. ಸರ್ಕಾರಿ ಶಾಲೆಗಳ ಉಳಿವಿಗೆ ಎಲ್ಲರೂ ಗಮನ ಹರಿಸಬೇಕು ಎಂದರು.

ಶಾಲಾ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಶಿಕ್ಷಣ ಇಲಾಖೆಯ ಸಂಪನ್ಮೂಲ ವ್ಯಕ್ತಿ ವಿಷ್ಣುವರ್ಧನ್, ಮುಖ್ಯ ಶಿಕ್ಷಕಿ ಚಂದ್ರಕಲಾ, ಶಿಕ್ಷಕರು ಮತ್ತು ಶಿಕ್ಷಕಿಯರು, ಮುದುಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಲೋಕೇಶ್ ದುಮ್ಮೇನಹಳ್ಳಿ, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.