ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರನ್ನು ಬಂಧಿಸುವಂತೆ ಆಗ್ರಹಿಸಿ ಯುವ ಕಾಂಗ್ರೆಸ್ ಜಿಲ್ಲಾ ಘಟಕದ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಹೊರಟ ಮುಖಂಡರು ಹಾಗೂ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆಯಲ್ಲಿ ಸಾಗಿ ಅಶ್ವತ್ಥನಾರಾಯಣ ಹಾಗೂ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ಈ ವೇಳೆ ಮಾತನಾಡಿದ ಕಾಂಗ್ರೆಸ್ ಮುಖಂಡರು, ಹೊಡಿ, ಬಡಿ ಎಂಬುದು ಬಿಜೆಪಿ ಸಂಸ್ಕೃತಿಯಾಗಿದ್ದು, ಸಚಿವ ಅಶ್ವತ್ಥನಾರಾಯಣ್ ಅವರನ್ನು ಸಂಪುಟದಿಂದ ತಕ್ಷಣವೇ ವಜಾ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸಿದ್ದರಾಮಯ್ಯ ಸರ್ವ ಜನಾಂಗದ ಸಾಮಾಜಿಕ ನ್ಯಾಯದ ಹರಿಕಾರರಾಗಿದ್ದಾರೆ. ಅವರ ವಿರುದ್ಧ ನಾಲಿಗೆ ಹರಿಬಿಟ್ಟಿದಲ್ಲದೆ, ದುರಹಂಕಾರಿ ಹೇಳಿಕೆ ನೀಡಿದ್ದಾರೆ. ಬಿಜೆಪಿ ಸರ್ಕಾರ ಡಾ.ಅಶ್ಚತ್ಥನಾರಾಯಣ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಕೆಲಕಾಲ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಕಾಂಗ್ರೆಸ್ ಪ್ರಚಾರ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ದೇವರಾಜೇಗೌಡ, ಗಾಯತ್ರಿ ಆನಂದ್, ರಾಮಚಂದ್ರ, ದೇವಪ್ಪ ಮಲ್ಲಿಗೆವಾಳು, ಕೀರ್ತಿಕುಮಾರ್, ಶ್ರೇಯಸ್ ಪಟೇಲ್, ವೆಂಕಟೇಶ್, ರಘು, ವಿಜಯ್ ಕುಮಾರ್, ಪ್ರಕಾಶ್ ಕಾರ್ಯಕರ್ತರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.