ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸ್ನೋಟಿಕರ್‌, ಜಿಟಿಡಿ ಪಕ್ಷ ತ್ಯಜಿಸಲ್ಲ: ದೇವೇಗೌಡ

Last Updated 25 ಫೆಬ್ರುವರಿ 2021, 12:52 IST
ಅಕ್ಷರ ಗಾತ್ರ

ಹಾಸನ: ಮಾಜಿ ಸಚಿವ ಆನಂದ್ ಅಸ್ನೋಟಿಕರ್, ಶಾಸಕ ಜಿ.ಟಿ. ದೇವೇಗೌಡ ಅವರು ಜೆಡಿಎಸ್‌ ಬಿಡುವ ಮಾತೇ ಇಲ್ಲ ಎಂದು ರಾಜ್ಯಸಭಾ ಸದಸ್ಯ ಎಚ್‌.ಡಿ.ದೇವೇಗೌಡ ಹೇಳಿದರು.

‘ಜಿ.ಟಿ. ದೇವೇಗೌಡ ಅವರು ನನ್ನ ಜೊತೆ ಮಾತನಾಡಿದ್ದಾರೆ. ಇಲ್ಲ ಸಲ್ಲದ ಊಹಾಪೋಹ ಬೇಡ. ಅವರು ಯಾರಾದರೂ ಪಕ್ಷ ಬಿಡುವುದಾಗಿ ಹೇಳಿದ್ದಾರೆಯೇ? ಆದರೆ, ಮಧು ಬಂಗಾರಪ್ಪ ಚುನಾವಣೆಯಲ್ಲಿ ಸೋತ ಬಳಿಕ ಒಂದೂವರೆ ವರ್ಷದಿಂದ ಪಕ್ಷದ ಕಚೇರಿಗೆ ಬರುತ್ತಿಲ್ಲ. ನಾನೂ ಅನೇಕ ಬಾರಿ ಕರೆದರೂ ಬಂದಿಲ್ಲ. ಅವರನ್ನ ಶಾಸಕರನ್ನಾಗಿ ಮಾಡಲು ಎಚ್.ಡಿ. ಕುಮಾರಸ್ವಾಮಿ ಅವರು ಪಟ್ಟ ಕಷ್ಟ ಏನೆಂಬುದು ಅರಿಯಬೇಕು’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

2023ರೊಳಗೆ ಪಕ್ಷವೇ ಇರುವುದಿಲ್ಲ ಅಂತ ಕೆಲವರು ಹೇಳಿದ್ದಾರೆ. ಆದರೆ ಪಕ್ಷವನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ. ಲಕ್ಷಾಂತರ ಕಾರ್ಯಕರ್ತರು ಇದ್ದಾರೆ. ಪಕ್ಷ ಸಂಘನೆಗೆ ಹೊಸ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದರು.

ಇಂಧನ, ಎಲ್‌ಪಿಜಿ ಸಿಲಿಂಡರ್‌ ದರ ಹೆಚ್ಚಳದಿಂದ ಜನಸಾಮಾನ್ಯರು ಹಾಗೂ ರೈತರಿಗೆ ಹೊರೆಯಾಗಿದೆ.
ಪ್ರತಿ ಜಿಲ್ಲೆಯಲ್ಲಿಯೂ ಆಯಾ ಜಿಲ್ಲೆಗೆ ಸಂಬಂಧಪಟ್ಟ ಸಮಸ್ಯೆಗಳೊಂದಿಗೆ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸುವಂತೆ ಸೂಚನೆ ನೀಡುತ್ತೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT