ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸ್ಸಾಂ ಮುಖ್ಯಮಂತ್ರಿ ರಾಜೀನಾಮೆಗೆ ಆಗ್ರಹ

ರಾಹುಲ್‌ ಗಾಂಧಿ ಬಗ್ಗೆ ಅವಹೇಳನಕಾರಿ ಹೇಳಿಕೆಗೆ ಖಂಡನೆ
Last Updated 15 ಫೆಬ್ರುವರಿ 2022, 16:33 IST
ಅಕ್ಷರ ಗಾತ್ರ

ಹಾಸನ: ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಬಗ್ಗೆಅವಹೇಳನಕಾರಿಯಾಗಿ ಮಾತನಾಡಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತಬಿಸ್ವಾ ಶರ್ಮಾ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಯುವ ಕಾಂಗ್ರೆಸ್‌ ಸಮಿತಿ ವತಿಯಿಂದ ಪ್ರತಿಭಟಿಸಲಾಯಿತು.

ನಗರದ ಹೇಮಾವತಿ ಪ್ರತಿಮೆ ಬಳಿ ಹಿಮಂತ್ ಬಿಸ್ವಾ ಶರ್ಮಾ ಪ್ರತಿಕೃತಿಯನ್ನಿಟ್ಟು ಘೋಷಣೆ ಕೂಗಿದರು.

ಯುವ ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ರಂಜಿತ್‌ ಗೊರೂರು ಮಾತನಾಡಿ ‘ಎಐಸಿಸಿ ಮಾಜಿ ಅಧ್ಯಕ್ಷರ ಹುಟ್ಟಿನ ದಾಖಲೆ ಕೇಳುವ ಹಿಮಂತ ಬಿಸ್ವಾ ಕೂಡಲೇ ರಾಹುಲ್ ಗಾಂಧಿ ಹಾಗೂ ದೇಶದ ಜನರ ಕ್ಷಮೆಯಾಚಿಸಬೇಕು’ ಎಂದು ಆಗ್ರಹಿಸಿದರು.

‘ಯುವಕರಿಗೆ, ಮಹಿಳೆಯರಿಗೆ ಗೌರವ ನೀಡುತ್ತೇವೆ, ದೇಶ ಕಟ್ಟುವ ಯುವಕರ ಜೊತೆ ಇರುತ್ತೇವೆ ಎಂದು ಬಿಜೆಪಿಯವರು ಹೇಳುತ್ತಾರೆ. ಆದರೆ, ದೇಶಕ್ಕೆ ಅಪಾರ ಕೊಡುಗೆ ನೀಡಿರುವ ಕುಟುಂಬದ ಬಗ್ಗೆ ಮಾತನಾಡುವಾಗ ನಾಲಿಗೆ ಮೇಲೆ ಹಿಡಿತ ಇರಬೇಕು.ಮುಖ್ಯಮಂತ್ರಿ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು. ಇಲ್ಲವಾದರೆ ಪಕ್ಷದ ವತಿಯಿಂದ ಪ್ರತಿಭಟನೆ ತೀವ್ರಗೊಳಿಸಲಾಗುವುದು’ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಮುಖಂಡರಾದ ಚಂದನ್‌ಗೌಡ, ಆಲ್ವೀನ್,ಪ್ರವಿಣ್, ರಾಜು, ಲಿಖಿತ್, ಶ್ರೀರಾಮ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT