ಶನಿವಾರ, ಮೇ 28, 2022
24 °C
ರಾಜ್ಯ ಮಟ್ಟದ ನೆಟ್ ಬಾಲ್ ಪಂದ್ಯಾವಳಿಗೆ ತೆರೆ

ರಾಜ್ಯ ಮಟ್ಟದ ನೆಟ್ ಬಾಲ್ ಪಂದ್ಯಾವಳಿ: ಹಾಸನದ ಬಾಲಕರ ತಂಡಕ್ಕೆ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ಜಿಲ್ಲಾ ಕ್ರೀಡಾಂಗಣದಲ್ಲಿ ಎರಡು ದಿನಗಳಿಂದ ನಡೆದ ರಾಜ್ಯ ಮಟ್ಟದ ನೆಟ್ ಬಾಲ್ ಟೂರ್ನ್‌ಮೆಂಟ್ ಅಂತಿಮ ಪಂದ್ಯದಲ್ಲಿ ಹಾಸನದ ಬಾಲಕರ ತಂಡ ಪ್ರಥಮ, ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದಿದೆ.

ಭಾನುವಾರ ನಡೆದ ಅಂತಿಮ ಪಂದ್ಯದಲ್ಲಿ ಬಾಲಕರ ವಿಭಾಗದಲ್ಲಿ ಹಾಸನ‌ ತಂಡ, ಮೈಸೂರು ತಂಡವನ್ನು (32-29) ಸೋಲಿಸಿ ಟ್ರೋಫಿ ಮುಡಿಗೇರಿಸಿಕೊಂಡಿತು. ಮೈಸೂರು ತಂಡ ದ್ವಿತೀಯ ಸ್ಥಾನ ಪಡೆಯಿತು.

ಬಾಲಕಿಯರ ವಿಭಾಗದಲ್ಲಿ ಬೆಂಗಳೂರು ತಂಡ ಹಾಸನ ತಂಡವನ್ನು ಮಣಿಸಿ (34-27)ಟ್ರೋಫಿ ತನ್ನದಾಗಿಸಿಕೊಂಡಿತು.

ಅಮೆಚೂರ್ ನೆಟ್ ಬಾಲ್ ಅಸೋಸಿಯೇಷನ್ ಆಫ್ ಕರ್ನಾಟಕ ಹಾಗೂ ಹಾಸನದ ನೆಟ್ ಬಾಲ್
ಅಸೋಸಿಯೇಷನ್ ಆಶ್ರಯದಲ್ಲಿ 19 ವರ್ಷ ವಯೋಮಿತಿಯ ಬಾಲಕ, ಬಾಲಕಿಯರ ರಾಜ್ಯ ಮಟ್ಟದ ನೆಟ್ ಬಾಲ್ ಪಂದ್ಯಾವಳಿ ಆಯೋಜಿಸಲಾಗಿತ್ತು. ರಾಜ್ಯದ ವಿವಿಧ ಭಾಗಗಳಿಂದ 30ಕ್ಕೂ ಹೆಚ್ಚು ತಂಡಗಳು ಪಾಲ್ಗೊಂಡಿದ್ದವು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು