ಸೋಮವಾರ, 2 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಂಬುಲೆನ್ಸ್‌ ಸಿಗದೆ ಗರ್ಭಿಣಿ ಹೊಟ್ಟೆಯಲ್ಲೇ ಮಗು ಸಾವು: ಆರೋಪ

Published 10 ಆಗಸ್ಟ್ 2023, 4:28 IST
Last Updated 10 ಆಗಸ್ಟ್ 2023, 4:28 IST
ಅಕ್ಷರ ಗಾತ್ರ

ಬೇಲೂರು: ‘ಪಟ್ಟಣದಲ್ಲಿ ಮಂಗಳವಾರ ರಾತ್ರಿ ಸಕಾಲಕ್ಕೆ ಆಂಬುಲೆನ್ಸ್ ಬಾರದೆ, ಗರ್ಭಿಣಿ ಆಶಾ ಅವರ ಹೊಟ್ಟೆಯಲ್ಲಿದ್ದ ಮಗು ಮೃತಪಟ್ಟಿತು’ ಎಂದು ಪೋಷಕರು ಆರೋಪಿಸಿದ್ದಾರೆ.

‘ನೆಹರು ನಗರದ ನಿವಾಸಿ ಆಶಾ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಆಂಬುಲೆನ್ಸ್‌ಗಾಗಿ 108 ಕ್ಕೆ ಕರೆ ಮಾಡಿದರೆ ಯಾರೂ ಸ್ವೀಕರಿಸಲಿಲ್ಲ. ನಂತರ ಅನಿವಾರ್ಯವಾಗಿ ಖಾಸಗಿ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ದಾಗ, ಮಗು ಹೊಟ್ಟೆಯಲ್ಲಿ ಮೃತಪಟ್ಟಿದೆ ಎಂದು ವೈದ್ಯರು ತಿಳಿಸಿದರು’ ಎಂದು ಆಶಾ ಕುಟುಂಬಸ್ಥರು ಆರೋಪಿಸಿದ್ದಾರೆ.

‘ಆಸ್ಪತ್ರೆಯ ಆಂಬುಲೆನ್ಸ್ ಚಾಲಕರಿಗೆ ಮತ್ತು ಆಸ್ಪತ್ರೆಗೆ ಯಾವುದೇ ಕರೆ ಬಂದಿಲ್ಲ’ ಎಂದು ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಸತೀಶ್ ಪ್ರತಿಕ್ರಿಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT