ಬಾಗೂರು (ನುಗ್ಗೇಹಳ್ಳಿ): ‘ಬಿ.ಆರ್. ಅಂಬೇಡ್ಕರ್ ಬರೆದಿರುವ ಸಂವಿಧಾನವನ್ನು ದೇಶದ ಪ್ರತಿಯೊಬ್ಬರು ಗೌರವಯುತವಾಗಿ ಅನುಸರಿಸಿದರೆ ಮಾತ್ರ ದೇಶದಲ್ಲಿ ಬದಲಾವಣೆ ತರಲು ಸಾಧ್ಯ’ ಎಂದು ಉಪನ್ಯಾಸಕ ರತ್ನಾಕರ್ ಅಭಿಪ್ರಾಯಪಟ್ಟರು.

ಹೋಬಳಿ ಕೇಂದ್ರದಲ್ಲಿ ಬಿ.ಆರ್.ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ ಹಾಗೂ ಯುವಕ ಬಳಗ ವತಿಯಿಂದ ಇತ್ತೀಚೆಗೆ ನಡೆದ ಅಂಬೇಡ್ಕರ್ ಅವರ 135ನೇ ವರ್ಷದ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ದೇಶದ ಕಟ್ಟ ಕಡೆಯ ವ್ಯಕ್ತಿಗೂ ಸಂವಿಧಾನದಲ್ಲಿ ನ್ಯಾಯ ಒದಗಿಸಿದ್ದಾರೆ. ಇದರಿಂದ ಇಂದು ಬಡವರ್ಗದ ಮಕ್ಕಳೂ ಉನ್ನತ ಸ್ಥಾನಕ್ಕೆ ಏರಲು ಸಾಧ್ಯವಾಗಿದೆ’ ಎಂದರು.

ಬಿಎಸ್ಪಿ ತಾಲ್ಲೂಕು ಘಟಕದ ಅಧ್ಯಕ್ಷ ರಾಜು ಕುಂದೂರು ಮಾತನಾಡಿ, ‘ಅಂಬೇಡ್ಕರ್ ಅವರ ಜನ್ಮದಿನದ ಆಚರಣೆ ಕೇವಲ ಒಂದು ಜನಾಂಗಕ್ಕೆ ಸೀಮಿತವಾಗಬಾರದು. ದೇಶದ ಎಲ್ಲಾ ವರ್ಗದ ಜನರು ಅವರ ಜನ್ಮ ದಿನೋತ್ಸವವನ್ನು ಆಚರಿಸಿದರೇ ಮಾತ್ರ ಸಂವಿಧಾನಕ್ಕೆ ಗೌರವ ಸಲ್ಲಿಸಿದಂತಾಗುತ್ತದೆ’ ಎಂದರು.

ಬಸವರಾಜು ಬ್ರಸ್ ಬ್ರಾಂಡ್ ಆರ್ಕೆಸ್ಟ್ರಾ ಕಾರ್ಯಕ್ರಮ ಮತ್ತು ವಿವಿಧ ಕಲಾತಂಡಗಳಿಂದ ಸಂಸ್ಕೃತ ಕಾರ್ಯಕ್ರಮ ನಡೆಯಿತು.

ಜಿ.ಪಂ. ಮಾಜಿ ಸದಸ್ಯ ರಾಮಚಂದ್ರು, ಉಪನ್ಯಾಸಕರಾದ ಪ್ರಸನ್ನ, ಸಂತೋಷ್, ಸೆಸ್ಕ್ ಎಂಜಿನಿಯರ್ ಬಾಗೂರು ಕುಮಾರ್, ದಲಿತ ಸಂಘರ್ಷ ಸಮಿತಿ ಸಂಯೋಜಕ ನಾಗರಾಜ್, ದಲಿತ ಸಂಘರ್ಷ ಸಮಿತಿ ಹೋಬಳಿ ಅಧ್ಯಕ್ಷ ಉಮೇಶ್, ಉಪಾಧ್ಯಕ್ಷ ಅಭಿ, ಕಾರ್ಯದರ್ಶಿ ಮನು, ಸಹ ಕಾರ್ಯದರ್ಶಿ, ಬಾಬು, ಖಜಾಂಚಿ ಕಿರಣ್, ಮುಖಂಡರಾದ ಕಾಳಯ್ಯ, ಮಂಜು, ಶಂಕರ್, ರಾಮು, ಮಂಜಣ್ಣ, ಪೂರ್ವಿಕ ಮೊಬೈಲ್ ಕುಮಾರ್ ಹಾಗೂ ಗ್ರಾಮಸ್ಥರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-36-239622735

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.