ಬಾಗೂರು: ‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಗ್ರಾಮೀಣ ಪ್ರದೇಶದಲ್ಲಿ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ಸಲುವಾಗಿ ಆರೋಗ್ಯ ಇಲಾಖೆಗೆ ಮುಂಬರುವ ಬಜೆಟ್ ನಲ್ಲಿ ಹೆಚ್ಚಿನ ಅನುದಾನ ನೀಡುವ ಮೂಲಕ ಆರೋಗ್ಯ ಇಲಾಖೆ ಬಲಪಡಿಸಬೇಕು’ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು.

ಹೋಬಳಿಯ ಓಬಳಾಪುರ ಗ್ರಾಮದಲ್ಲಿ ಆರೋಗ್ಯ ಇಲಾಖೆಯ ಆಯುಷ್ಮಾನ್ ಸ್ವಾಸ್ಥ್ಯ ಯೋಜನೆ ವತಿಯಿಂದ ಸುಮಾರು 65 ಲಕ್ಷ ವೆಚ್ಚದಲ್ಲಿ ನೂತನ ಆರೋಗ್ಯ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

‘ಕೇಂದ್ರ ಸರ್ಕಾರದ 15ನೇ ಹಣಕಾಸಿನ ಯೋಜನೆ ಮೂಲಕ ಆರೋಗ್ಯ ಇಲಾಖೆಯ ಆಯುಷ್ಮಾನ್ ಸ್ವಾಸ್ಥ್ಯ ಯೋಜನೆ ವತಿಯಿಂದ ಸುಮಾರು 43 ಹೊಸ ಕಟ್ಟಡಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿದೆ ಇಡೀ ಜಿಲ್ಲೆಯಲ್ಲೇ ತಾಲೂಕಿಗೆ ಹೊಸ ಕಟ್ಟಡ ನಿರ್ಮಾಣಕ್ಕೆ ಅನುದಾನ ದೊರೆತಿದೆ. ಆರೋಗ್ಯ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸ್ಟಾಪ್ ನರ್ಸ್ ಸೇರಿದಂತೆ ವಿವಿಧ ಸಿಬ್ಬಂದಿಗಳಿಗೆ ಕಳೆದ 5 ತಿಂಗಳಿಂದ ಆರೋಗ್ಯ ಇಲಾಖೆಯಿಂದ ವೇತನ ಬಿಡುಗಡೆಯಾಗದೆ ನೌಕರರು ಸಂಕಷ್ಟದಲ್ಲಿದ್ದು ಈ ಬಗ್ಗೆ ಆರೋಗ್ಯ ಸಚಿವರು ಹಾಗೂ ಇಲಾಖೆಯ ಮುಖ್ಯ ಕಾರ್ಯದರ್ಶಿಗಳು ಮಾನವೀಯತೆಯ ದೃಷ್ಟಿಯಿಂದ ಅವರ ನೆರವಿಗೆ ಸರ್ಕಾರ ಮುಂದಾಗಬೇಕು’ ಎಂದು ಹೇಳಿದರು.

‘ಓಬಳಾಪುರ ಗ್ರಾಮದಿಂದ ದ್ಯಾವನೂರು ಗ್ರಾಮಕ್ಕೆ ಹಾಗೂ ಗೋವಿನಕೆರೆ ಗ್ರಾಮಕ್ಕೆ ಸಂಪರ್ಕಿಸುವ ರಸ್ತೆ ಅಭಿವೃದ್ಧಿಗೆ ಮುಂದಿನ ಆರ್ಥಿಕ ವರ್ಷದಲ್ಲಿ ಹೆಚ್ಚಿನ ಅನುದಾನ ಕೊಡುವ ಮೂಲಕ ರಸ್ತೆ ಅಭಿವೃದ್ಧಿಪಡಿಸಲಾಗುತ್ತದೆ ಗ್ರಾಮದ ಪರಿಮಿತಿಯಲ್ಲಿ ಈಗಾಗಲೇ 90ರಷ್ಟು ರಸ್ತೆ ಹಾಗೂ ಒಳಚರಂಡಿ ಅಭಿವೃದ್ಧಿಗೆ ಹೆಚ್ಚು ಗಮನಹರಿಸಲಾಗಿದೆ’ ಎಂದರು.

ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಎಚ್. ಶಿವಣ್ಣ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮರಿದೇವೇಗೌಡ, ತಾಪಂ ಮಾಜಿ ಸದಸ್ಯ ಓಬಳಾಪುರ ಬಸವರಾಜ್, ಉದ್ಯಮಿ ಅಣತಿ ಯೋಗೇಶ್, ಟಿಎಪಿಎಂಎಸ್ ನಿರ್ದೇಶಕ ಬಾಗೂರು ಮನು, ಮುಖಂಡರಾದ ತಮ್ಮಯಣ್ಣ, ರಂಗೇಗೌಡ, ಸಂಪತ್ ಕುಮಾರ್, ನ್ಯಾಯ ಬೆಲೆ ಅಂಗಡಿ ರಂಗೇಗೌಡ, ಗುತ್ತಿಗೆದಾರ ಮಹೇಶ್ ಭಾಗವಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.