ಮಂಗಳವಾರ, ಮಾರ್ಚ್ 21, 2023
23 °C

ಬಾಲಗಂಗಾಧರನಾಥ ಸ್ವಾಮೀಜಿ ಜಯಂತಿ ಆಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ಡಾ.ಬಾಲಗಂಗಾಧರನಾಥ ಸ್ವಾಮೀಜಿಯವರ 78 ನೇ ಜನ್ಮ ಜಯಂತಿಯನ್ನು ಮಾಜಿ ಶಾಸಕ ದಿ.ಎಚ್.ಎಸ್ ಪ್ರಕಾಶ್ ಕುಟುಂಬ ಸದಸ್ಯರು ಹಾಗೂ ಮಠದ ಭಕ್ತರು ನಗರದ ಹೇಮಾವತಿ ಪ್ರತಿಮೆ ಬಳಿ ಅನ್ನದಾನ ಮಾಡುವ ಮೂಲಕ ಆಚರಿಸಿದರು.

ಶ್ರೀಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮಹಾಮಂಗಳಾರತಿ ನೆರವೇರಿಸಲಾಯಿತು. ಈ ವೇಳೆ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಎಚ್.ಎಲ್ ಮಲ್ಲೇಶಗೌಡ, ‘ಡಾ.ಬಾಲಗಂಗಾಧರನಾಥ ಸ್ವಾಮೀಜಿಯವರು ಈ ಸಮಾಜಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರು ಬಹುವಿಧ ದಾಸೋಹಿಗಳಾಗಿ ನಾಡಿಗೆ ನೀಡಿರುವ ಕೊಡುಗೆ ಮಹತ್ತರವಾದುದು’ ಎಂದರು.

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಚ್‌.ಪಿ. ಸ್ವರೂಪ್ ಮಾತನಾಡಿ, ‘ಶ್ರೀಗಳು ಒಂದು ಸಮುದಾಯಕ್ಕೆ ಸೀಮಿತವಾಗದೇ ಇಡೀ ಸಮಾಜದಲ್ಲಿ ನೊಂದ ವರ್ಗದ ಜನತೆಗೆ ದನಿಯಾದರು. ಶ್ರೀಮಠದಲ್ಲಿ ಸಾವಿರಾರು ಬಡ ವಿದ್ಯಾರ್ಥಿಗಳಿಗೆ ಅವರು ನೀಡಿದ ವಿದ್ಯಾದಾನದಿಂದ ಅವರ ಹೆಸರು ಶಾಶ್ವತವಾಗಿ ಉಳಿಯುವಂತೆ ಮಾಡಿದೆ’ ಎಂದು ತಿಳಿಸಿದರು.

ನೂರಾರು ಜನರಿಗೆ ಅನ್ನದಾಸೋಹ ನಡೆಸಲಾಯಿತು. ಒಕ್ಕಲಿಗರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಎಲ್. ಮುದ್ದೇಗೌಡ, ಕಾರ್ಯದರ್ಶಿ ಅಪ್ಪೇಗೌಡ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ರಘುಗೌಡ, ನಗರಸಭೆ ಮಾಜಿ ಅಧ್ಯಕ್ಷ ಎಚ್.ಎಸ್. ಅನಿಲ್ ಕುಮಾರ್, ನಗರಸಭೆ ಸದಸ್ಯ ಚಂದ್ರೇಗೌಡ, ಕುವೆಂಪು ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಬಿ.ಈ. ಶಿವರಾಮೇಗೌಡ, ಮಠದ ವ್ಯವಸ್ಥಾಪಕ ಚಂದ್ರಶೇಖರ್, ಸಾಹಿತ್ಯ ಪರಿಷತ್‌ ಗೌರವ ಕಾರ್ಯದರ್ಶಿ ಬಿ.ಆರ್. ಬೊಮ್ಮೇಗೌಡ, ಟೈಮ್ಸ್ ಸಂಸ್ಥೆಯ ಕಾರ್ಯದರ್ಶಿ ಗಂಗಾಧರ್, ಆರ್.ಬಿ. ಶಂಕರ್ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು