ಬಾಂಗ್ಲಾ ವಲಸಿಗರನ್ನು ದೇಶದಿಂದ ಹೊರಗಟ್ಟಿ: ಪ್ರಮೋದ್ ಮುತಾಲಿಕ್ ಆಗ್ರಹ

7
ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಗ್ರಹ

ಬಾಂಗ್ಲಾ ವಲಸಿಗರನ್ನು ದೇಶದಿಂದ ಹೊರಗಟ್ಟಿ: ಪ್ರಮೋದ್ ಮುತಾಲಿಕ್ ಆಗ್ರಹ

Published:
Updated:
Deccan Herald

ಹಾಸನ : ‘ಬಾಂಗ್ಲಾದೇಶದ 40 ಲಕ್ಷಕ್ಕೂ ಹೆಚ್ಚು ಮಂದಿ ನುಸುಳುಕೋರರನ್ನು ದೇಶದಿಂದ ಹೊರಗಟ್ಟಬೇಕು. ಇಲ್ಲವಾದರೆ ಉಗ್ರ ಹೋರಾಟ ಕೈಗೊಂಡು ಹೊರ ಹಾಕುವ ಕೆಲಸ ಮಾಡಬೇಕಾಗುತ್ತದೆ’ ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಎಚ್ಚರಿಸಿದರು.

‘ಅಸ್ಸಾಂನಲ್ಲಿ 40 ಲಕ್ಷ ಮಂದಿ ದೇಶದ ಪೌರತ್ವ ಇಲ್ಲದ ಬಾಂಗ್ಲಾದ ಮುಸ್ಲಿಂರು ಇದ್ದಾರೆ. ಈ ಬಗ್ಗೆ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ ಸಿ) ಅಧಿಕಾರಿಗಳೇ ಸ್ಪಷ್ಟಪಡಿಸಿದ್ದಾರೆ. ಬಾಂಗ್ಲಾ ವಲಸಿಗರು ದೇಶದಲ್ಲಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾರೆ’ ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಾಂಗ್ಲಾ ವಲಸಿಗರ ಪರ ನಿಂತಿದ್ದು, ಇದಕ್ಕೆ ಕಾಂಗ್ರೆಸ್ ಮತ್ತು ಎಚ್.ಡಿ.ದೇವೇಗೌಡರು ಬೆಂಬಲ ನೀಡುತ್ತಿರುವುದು ಖಂಡನಾರ್ಹ. ದೇಶದ ಸುರಕ್ಷತೆ ಮುಖ್ಯ, ನಂತರ ರಾಜಕೀಯ ನೋಡಬೇಕು ಎಂದು ಅಭಿಪ್ರಾಯಪಟ್ಟರು.

‘ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಚುನಾವಣಾ ವೇಳೆ   ರಾಜ್ಯದಲ್ಲಿ 40 ಸಾವಿರ ಪೌರತ್ವ ಇಲ್ಲದ ಬಾಂಗ್ಲಾ ದೇಶದವರು ಇದ್ದಾರೆ ಎಂದು ಸಿ.ಡಿ ಬಿಡುಗಡೆ ಮಾಡಿದ್ದರು. ಹಾಸನ ಜಿಲ್ಲೆಯ ಸಕಲೇಶಪುರ, ಬೇಲೂರು, ಆಲೂರು ತಾಲ್ಲೂಕುಗಳು ಕಾಫಿ ತೋಟಗಳಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸಕ್ಕೆ ಸೇರಿಕೊಂಡಿರುವ ಬಾಂಗ್ಲಾ ವಲಸಿಗರನ್ನು ಸಂರಕ್ಷಣೆ ಮಾಡುವ ಮೂಲಕ ಜೆಡಿಎಸ್ ದ್ವಂದ್ವ ನೀತಿ ಅನುಸರಿಸುತ್ತಿದೆ’ ಎಂದು ದೂರಿದರು.

‘ಮಹದಾಯಿ ನದಿಯಿಂದ ರಾಜ್ಯಕ್ಕೆ 13.42 ಟಿಎಂಸಿ ಅಡಿ ನೀರು ಸಿಕ್ಕಿದೆ. 4 ಜಿಲ್ಲೆಯ 13 ತಾಲ್ಲೂಕುಗಳ ಜನರ ಕುಡಿಯುವ ನೀರಿಗೆ 36 ಟಿಎಂಸಿ ನೀರು ಕೇಳಿದ್ದೆವು. ಈಗ ನೀಡಿರುವ ತೀರ್ಪಿನ ಅನ್ವಯ ಕೂಡಲೇ 13 ಟಿಎಂಸಿ ನೀರು ಬಿಡುಗಡೆ ಮಾಡಬೇಕು’ ಎಂದು ಹೇಳಿದರು.

ಆ. 22 ಕ್ಕೆ ಬಕ್ರೀದ್ ಹಬ್ಬ ಇದ್ದು, ಅಂದು ಗೋ ಹತ್ಯೆಯಾಗದಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಪಶು ವೈದ್ಯರಿಗೆ ರಾಜ್ಯ ಸರ್ಕಾರ ಆದೇಶ ನೀಡಿರುವುದು ಸ್ವಾಗತಾರ್ಹ. 1964ರ ಕಾನೂನಿನ ಅಡಿ ಒಂದೇ ಒಂದು ಹಸುವನ್ನು ಹತ್ಯೆ ಮಾಡುವಂತಿಲ್ಲ. ಈ ಸಂಬಂಧ ಶ್ರೀರಾಮಸೇನೆ ವತಿಯಿಂದ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗೆ ಆ. 17 ರಂದು ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.

ಶ್ರೀರಾಮ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಜಾನೆಕೆರೆ ಹೇಮಂತ್, ಮುಖಂಡರಾದ ಅಭಿಗೌಡ, ಪ್ರವೀಣ್, ಮಹಾಲಿಂಗ ಇದ್ದರು.

ಬರಹ ಇಷ್ಟವಾಯಿತೆ?

 • 4

  Happy
 • 1

  Amused
 • 1

  Sad
 • 0

  Frustrated
 • 0

  Angry

Comments:

0 comments

Write the first review for this !