ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬರ ಪರಿಹಾರ ನಿರ್ವಹಣೆಯಲ್ಲಿ ನಿರ್ಲಕ್ಷ್ಯ

15ಕ್ಕೆ ರಾಜ್ಯ, ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ
Last Updated 12 ಜುಲೈ 2019, 14:30 IST
ಅಕ್ಷರ ಗಾತ್ರ

ಹಾಸನ: ಬರ ಪರಿಹಾರ ನಿರ್ವಹಣೆಯಲ್ಲಿ ವಿಫಲವಾಗಿರುವ ರಾಜ್ಯ ಮತ್ತು ಕೆಂದ್ರ ಸರ್ಕಾರದ ವಿರುದ್ಧ ಜುಲೈ 15 ರಂದು ರಾಜ್ಯಾದಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಿಪಿಐ ಕಾರ್ಯದರ್ಶಿ ಸಾಥಿ ಸುಂದರೇಶ್ ತಿಳಿಸಿದರು.

ರಾಜ್ಯದಲ್ಲಿ ಬರ ಪರಿಸ್ಥಿತಿ ಗಂಭೀರವಾಗಿದ್ದು, ಹಲವು ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದ 156 ತಾಲ್ಲೂಕುಗಳಲ್ಲಿ ಬರ ಇದ್ದು, ಕುಡಿಯಲು ನೀರು ಸಿಗದಂತಹ ಪರಿಸ್ಥಿತಿ ಎದುರಾಗಿದೆ. ಜಾನುವಾರುಗಳಿಗೆ ಮೇವು ಸಿಗುತ್ತಿಲ್ಲ. ಕೃಷಿ ಚಟುವಟಿಕೆಗಳು ಸ್ಥಗಿತಗೊಂಡಿದೆ. ಇಂತಹ ಸಂದರ್ಭದಲ್ಲೂ ಮೈತ್ರಿ ಸರ್ಕಾರ ಜನರ ಸಮಸ್ಯೆಗೆ ಸ್ಪಂದಿಸದೆ ಅಧಿಕಾರ ಉಳಿಸಿಕೊಳ್ಳುವ ಪ್ರಯತ್ನದಲ್ಲಿದೆ. ವಿರೋಧ ಪಕ್ಷ ಬಿಜೆಪಿ ಸಹ ಅಧಿಕಾರ ಹಿಡಿಯಲು ಸಂಚು ರೂಪಿಸುತ್ತಿದೆ ಎಂದು ಸುದ್ದಿಗೋಷ್ಟಿಯಲ್ಲಿ ಸುಂದರೇಶ್ ಆರೋಪಿಸಿದರು.

ಕೇಂದ್ರದ ಅಧ್ಯಯನ ತಂಡ ರಾಜ್ಯದ ಬರ ಪರಿಸ್ಥಿತಿಯನ್ನು ಪರಿಶೀಲಿಸಿ ₹ 30 ಸಾವಿರ ಕೋಟಿ ಅನುದಾನ ಅಗತ್ಯ ಇದೆ ಎಂದು ವರದಿಯಲ್ಲಿ ತಿಳಿಸಿದೆ. ಆದರೆ, ಕೇಂದ್ರ ₹ 950 ಕೋಟಿ ಮಾತ್ರ ಬಿಡುಗಡೆ ಮಾಡಿದೆ. ಬರಪೀಡಿತ ಪ್ರದೇಶಗಳಲ್ಲಿ ಜನಪ್ರತಿನಿಧಿಗಳು ಭೇಟಿ ನೀಡಬೇಕು. ಪರಿಹಾರಕ್ಕಾಗಿ ಕೇಂದ್ರಕ್ಕೆ ರಾಜ್ಯ ಸರ್ಕಾರ ನಿಯೋಗ ತೆರಳಬೇಕು ಎಂದು ಒತ್ತಾಯಿಸಿದರು.

ಕೇಂದ್ರದಿಂದ ಉದ್ಯೋಗ ಖಾತ್ರಿಯ ₹ 1500 ಕೋಟಿ ಹಣ ರಾಜ್ಯಕ್ಕೆ ಬಾಕಿ ಬರಬೇಕಿದೆ. ಶೀಘ್ರ ಈ ಹಣವನ್ನು ಬಿಡುಗಡೆ ಮಾಡಬೇಕು ಎಂದರು.

ಗೋಷ್ಟಿಯಲ್ಲಿ ಜಿಲ್ಲಾ ಕಾರ್ಯದರ್ಶಿ ಎಂ.ಸಿ. ಡೋಂಗ್ರೆ, ಸಹ ಕಾರ್ಯದರ್ಶಿ ಸಿ.ಧರ್ಮರಾಜು, ಪದಾಧಿಕಾರಿಗಳಾದ ಪ್ರಸನ್ನ ಕುಮಾರ್, ಕೊಟ್ಟೂರು ಶ್ರೀನಿವಾಸ್, ಸಂತೋಷ್ ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT