ನದಿ ದಂಡೆ ಜನರಿಗೆ ಎಚ್ಚರಿಕೆ

7
ಮಲೆನಾಡಲ್ಲಿ ಜೋರು ಮಳೆ, ಹೇಮೆಗೆ ನೀರು

ನದಿ ದಂಡೆ ಜನರಿಗೆ ಎಚ್ಚರಿಕೆ

Published:
Updated:

ಹಾಸನ: ಮಲೆನಾಡು ಭಾಗದಲ್ಲಿ ಸೋಮವಾರ ಉತ್ತಮ ಮಳೆಯಾಗಿದೆ.  ಸಕಲೇಶಪುರ, ಆಲೂರು, ಬೇಲೂರು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಗೊರೂರಿನ ಹೇಮಾವತಿ ಜಲಾಶಯದ ಒಳ ಹರಿವು ಹೆಚ್ಚಾಗಿದೆ. 37.10 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯಕ್ಕೆ ಸೋಮವಾರ ಸಂಜೆ 22850 ಕ್ಯುಸೆಕ್‌ ಒಳ ಹರಿವಿದ್ದು, 24100 ಕ್ಯುಸೆಕ್‌ ನೀರು ಬಿಡಲಾಗುತ್ತಿದೆ. 2922 ಅಡಿ ಗರಿಷ್ಠ ಮಟ್ಟದ ಅಣೆಕಟ್ಟೆಯಲ್ಲೀಗ 2921ಅಡಿ ನೀರು ಸಂಗ್ರಹವಾಗಿದೆ.

‘ಜಲಾನಯನ ಪ್ರದೇಶದಲ್ಲಿ ಮಳೆ ಹೆಚ್ಚಾಗಿರುವುದರಿಂದ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಅಣೆಕಟ್ಟೆಗೆ ನೀರು ಹರಿದು ಬರುವ ಸಾಧ್ಯತೆ ಇದೆ. ಹಾಗಾಗಿ ನದಿಗೆ ಬಿಡುವ ನೀರಿನ ಪ್ರಮಾಣವನ್ನು ಹೆಚ್ಚಿಸಲಾಗುವುದು. ಆದ್ದರಿಂದ ನದಿ ದಂಡೆಯಲ್ಲಿ ವಾಸಿಸುವ ಗ್ರಾಮಸ್ಥರು, ಸುರಕ್ಷಿತ ಸ್ಥಳಕ್ಕೆ ತೆರಳಬೇಕು’ ಹೇಮಾವತಿ ಯೋಜನಾ ವೃತ್ತ ಅಧೀಕ್ಷಕ ಎಂಜಿನಿಯರ್‌ ಎಚ್ಚರಿಸಿದ್ದಾರೆ.

Tags: 

ಬರಹ ಇಷ್ಟವಾಯಿತೆ?

  • 1

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !