ಬೆಳೆಸಾಲ ಮನ್ನಾಕ್ಕೆ ಹೆಸರು ನೋಂದಾಯಿಸಿ, ಡಿ.31ರ ವರೆಗೆ ಗಡುವು

7
ಗೊಂದಲಕ್ಕೆ ಅವಕಾಶ ನೀಡದಂತೆ ಡಿ.ಸಿ ಮನವಿ

ಬೆಳೆಸಾಲ ಮನ್ನಾಕ್ಕೆ ಹೆಸರು ನೋಂದಾಯಿಸಿ, ಡಿ.31ರ ವರೆಗೆ ಗಡುವು

Published:
Updated:
Deccan Herald

ಹಾಸನ: ವಾಣಿಜ್ಯ ಬ್ಯಾಂಕ್ ಗಳಲ್ಲಿ ರೈತರು ಮಾಡಿರುವ ಸಾಲ ಮನ್ನಾ ಮಾಡಲು ತಂತ್ರಾಂಶ ತಂದಿದ್ದು, ಅದಕ್ಕಾಗಿ ಜಿಲ್ಲೆಯ ಎಲ್ಲಾ ರೈತರು ಸೂಚನೆಗಳನ್ನು ಪಾಲಿಸುವ ಮೂಲಕ ಯೋಜನೆ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮನವಿ ಮಾಡಿದ್ದಾರೆ.

ಡಿ.31ರೊಳಗೆ ಪ್ರತಿಯೊಬ್ಬ ರೈತರು ತಾವು ಸಾಲ ಪಡೆದ ವಾಣಿಜ್ಯ ಬ್ಯಾಂಕ್ ಗಳಿಗೆ ಬಂದು ತಮ್ಮ ಹೆಸರುಗಳನ್ನು ನೋಂದಾಯಿಸಬೇಕು. ರೈತರು ಕಡ್ಡಾಯವಾಗಿ ತಮ್ಮ ಆಧಾರ್ ಕಾರ್ಡ್, ರೇಷನ್ ಕಾರ್ಡ್ ನಕಲು ಪ್ರತಿಗಳನ್ನು ಮತ್ತು ತಾವು ಸಾಲ ಪಡೆದ ಸರ್ವೆ ನಂಬರ್‌ ಮಾಹಿತಿ (ಪಹಣಿ ಅವಶ್ಯಕತೆ ಇರುವುದಿಲ್ಲ) ತಪ್ಪದೇ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

ಒಂದು ಬ್ಯಾಂಕ್ ಶಾಖೆಯಲ್ಲಿ ಪ್ರತಿ ದಿನ ಕನಿಷ್ಠ 40 ರೈತರ ಹೆಸರು ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ನಂತರದ ರೈತರಿಗೆ ಕ್ರಮ ಬದ್ದವಾಗಿ ಕ್ರಮ ಸಂಖ್ಯೆ ಮತ್ತು ದಿನಾಂಕ ನಮೂದಿಸಿ ಟೋಕನ್ ಗಳನ್ನು ನೀಡಿದ ದಿನಾಂಕಗಳಂದು ಬ್ಯಾಂಕ್ ಶಾಖೆಗೆ ತೆರಳಿ ರೈತರ ಸ್ವಯಂ ದೃಢೀಕರಣ ಪತ್ರದೊಂದಿಗೆ ಆಧಾರ್ ಕಾರ್ಡ್, ಪಡಿತರ ಚೀಟಿಗಳ ನಕಲು ಮತ್ತು ಭೂಮಿಯ ಸರ್ವೆ ನಂ. ವಿವರಗಳನ್ನು ಒದಗಿಸಬೇಕು ಎಂದು ಹೇಳಿದ್ದಾರೆ.

ಬ್ಯಾಂಕ್ ಶಾಖೆಗಳಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಸಾಕಷ್ಟು ಸಮಯಾವಕಾಶ ನೀಡಲಾಗಿದ್ದು, ರೈತರು ಯಾವುದೇ ಗೊಂದಲಗಳಿಗೆ ಒಳಗಾಗದೇ ಶಾಂತ ರೀತಿಯಿಂದ ಸರತಿ ಸಾಲಿನಲ್ಲಿ ನಿಂತು ಬ್ಯಾಂಕ್ ಅಧಿಕಾರಿಗಳೊಂದಿಗೆ ಸಹಕರಿಸಬೇಕು.

ಪ್ರತಿ ಬ್ಯಾಂಕ್ ಶಾಖೆಯಲ್ಲಿ ಒಬ್ಬ ಗ್ರಾಮ ಲೆಕ್ಕಾಧಿಕಾರಿ ಹಾಗೂ ಪೊಲೀಸ್ ಬಂದೋಬಸ್ತ್‌ ಮಾಡಲಾಗಿದೆ. ರೈತರಿಗೆ ಯಾವುದಾದರೂ ಗೊಂದಲ, ಸಂದೇಹಗಳಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಹಾಯವಾಣಿ ಸಂಖ್ಯೆ 253345 ಗೆ ಸಂಪಕಿಸಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದು.

 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !