ಬೇಲೂರು: ರಕ್ತದಾನದ ಮಹತ್ವದ ಬಗ್ಗೆ ಜಾಗೃತಿ ಹೆಚ್ಚಾಗಬೇಕಿದೆ ಎಂದು ಯಸಳೂರು ಬೃಹನ್ಮಠದ ಚನ್ನಸಿದ್ದೇಶ್ವರ ಸ್ವಾಮೀಜಿ ಹೇಳಿದರು.

ಪುಷ್ಪಗಿರಿ ಮಠದ ಕಾರ್ಯದರ್ಶಿ ಗ್ರಾನೈಟ್ ರಾಜಶೇಖರ್ ಅಭಿಮಾನಿಗಳ ಬಳಗದಿಂದ ಸೋಮವಾರ ಇಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು.

ಯುವಕರು ಹಾಗೂ ಆರೋಗ್ಯವಂತರು ವರ್ಷಕ್ಕೊಮ್ಮೆ ರಕ್ತದಾನ ಮಾಡಿದರೂ ಆರೋಗ್ಯ ವೃದ್ಧಿಯಾಗುವ ಜೊತೆಗೆ, ಬೇರೆ ಜೀವ ಉಳಿಸಲು ಸಹಕಾರಿಯಾಗುತ್ತದೆ. ರಾಜಶೇಖರ್ ಅಭಿಮಾನಿಗಳು ರಕ್ತದಾನ ಶಿಬಿರ ಆಯೋಜಿಸಿರುವುದು ಶ್ಲಾಘನೀಯ ಎಂದರು.

ಗ್ರಾನೈಟ್ ರಾಜಶೇಖರ್ ಮಾತನಾಡಿ, ಮನುಷ್ಯ ಹುಟ್ಟು-ಸಾವಿನ ಮಧ್ಯೆ ಸಮಾಜಕ್ಕೆ ಯಾವುದಾದರೂ ಒಂದು ರೂಪದಲ್ಲಿ ಸೇವೆ ಸಲ್ಲಿಸಬೇಕು ಎಂದರು.

ಚಿಕ್ಕಮಗಳೂರಿನ ಬಸವತತ್ವಪೀಠದ ಬಸವಮರುಳಸಿದ್ದೇಶ್ವರ ಸ್ವಾಮೀಜಿ, ಪುರಸಭೆ ಅಧ್ಯಕ್ಷ ಅಕ್ರಂ ಷರೀಪ್ ಮಾತನಾಡಿದರು.

ರೆಡ್ ಕ್ರಾಸ್ ಘಟಕದ ತಾಲ್ಲೂಕು ಸಭಾಪತಿ ವೈ.ಎಸ್.ಸಿದ್ದೇಗೌಡ, ವೀರಶೈವ–ಲಿಂಗಾಯತ ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷೆ ವೀಪುಸಂತೋಷ್, ಪ್ರಮುಖರಾದ ಗೆಂಡೇಹಳ್ಳಿ ಚೇತನ್, ಶೋಭಾಗಣೇಶ್, ಜಗದೀಶ್, ಭರತ್, ಸುರೇಶ್, ಗೋವಿನಹಳ್ಳಿ ರವಿ, ಮಸಾಲೆ ಮಂಜು, ಉಪನ್ಯಾಸಕ ಲಕ್ಷ್ಮಿನಾರಾಯಣ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-36-678962325

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.