ಬೇಲೂರು: ಇಲ್ಲಿನ ಪುರಸಭೆಯಲ್ಲಿ ಅಧ್ಯಕ್ಷ ಅಕ್ರಂ ಷರೀಫ್ ಅವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ವಿಶೇಷ ಸಭೆಯಲ್ಲಿ ಹಲವು ಪ್ರಮುಖ ಅಭಿವೃದ್ಧಿ ಕಾಮಗಾರಿಗಳು ಹಾಗೂ ಕ್ರಿಯಾ ಯೋಜನೆಗಳಿಗೆ ಅನುಮೋದನೆ ನೀಡಲಾಯಿತು.

ಎಸ್ಎಫ್ಸಿ ಮುಕ್ತನಿಧಿಯ ₹6 ಲಕ್ಷ ಹಾಗೂ 15ನೇ ಹಣಕಾಸು ಆಯೋಗದ ಘನತ್ಯಾಜ್ಯ ನಿರ್ವಹಣೆಯ ₹1.57 ಕೋಟಿ ಸೇರಿದಂತೆ ಹಲವು ಯೋಜನೆಗಳ ಕುರಿತು ಚರ್ಚೆ ನಡೆಯಿತು.

ಘನತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ₹26.88 ಲಕ್ಷ ವೆಚ್ಚದಲ್ಲಿ ತ್ಯಾಜ್ಯ ವಿಲೇವಾರಿ ಹೊಂಡಕ್ಕೆ ಹೆಚ್ಡಿಪಿಇ ಲೈನರ್ ಅಳವಡಿಕೆ, ವಾರ್ಡ್ 4ರ ಅಂತರಘಟ್ಟಮ್ಮ ದೇಗುಲ ರಸ್ತೆ ಅಭಿವೃದ್ಧಿಗೆ ₹24.94 ಲಕ್ಷ , ನೀರು ಶುದ್ಧೀಕರಣ ಘಟಕಕ್ಕೆ 120 ಎಚ್ಪಿ ಪಂಪ್ ಮೋಟಾರ್ ಮತ್ತು ಸ್ಟಾರ್ಟರ್ ಬೋರ್ಡ್ ಅಳವಡಿಕೆಗೆ ₹16 ಲಕ್ಷ ವೆಚ್ಚ ಮಾಡುವ ಕಾಮಗಾರಿಗಳಿಗೆ ಸಭೆಯಲ್ಲಿ ಸದಸ್ಯರು ಒಪ್ಪಿಗೆ ಸೂಚಿಸಿದರು.

ಪುರಸಭೆ ಅಧ್ಯಕ್ಷ ಅಕ್ರಂ ಷರೀಫ್ ಮಾತನಾಡಿ, ‘ಎಲ್ಲಾ ಸದಸ್ಯರ ಸಹಕಾರದಿಂದ ಅಭಿವೃದ್ಧಿ ಕಾಮಗಾರಿಗಳನ್ನು ವೇಗವಾಗಿ ಪೂರ್ಣಗೊಳಿಸಲಾಗುವುದು. ನೀರಿನ ಜಾಕ್ವೆಲ್ನಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳಿದ್ದು ಸರಿಪಡಿಸಲು ಕ್ರಮಕೈಗೊಳ್ಳಲಾಗಿದೆ’ ಎಂದರು.

ಸದಸ್ಯರಾದ ಜಗದೀಶ್ ಹಾಗೂ ತೀರ್ಥಕುಮಾರಿ ವೆಂಕಟೇಶ್ ಮಾತನಾಡಿ, ಘನತ್ಯಾಜ್ಯ ಘಟಕಕ್ಕೆ ಖರೀದಿಸಲಾಗುತ್ತಿರುವ ಯಂತ್ರೋಪಕರಣಗಳು ಹಾಗೂ ಖರೀದಿ ಪ್ರಕ್ರಿಯೆಗಳ ಬಗ್ಗೆ ಮಾಹಿತಿ ನೀಡುವಂತೆ ಅಧಿಕಾರಿಗಳನ್ನು ಒತ್ತಾಯಿಸಿದರು. ಸದಸ್ಯೆ ತೀರ್ಥಕುಮಾರಿ ವೆಂಕಟೇಶ್ ಮಾತನಾಡಿ, ‘ಅಧಿಕಾರಿಗಳಿಗೆ ಚುರುಕು ಮುಟ್ಟಿಸಿದರೆ ಮಾತ್ರ ಅಭಿವೃದ್ಧಿ ಕಾಮಗಾರಿಗಳು ವೇಗವಾಗಿ ಸಾಗುತ್ತವೆ’ ಎಂದರು.

ಸದಸ್ಯ ಬಿ.ಎ. ಜಮಾಲುದ್ದೀನ್ ಮಾತನಾಡಿ, ಪಟ್ಟಣದಲ್ಲಿ ಕುಡಿಯುವ ನೀರು ಪೂರೈಕೆ ಹಾಗೂ ಕಸ ಸಂಗ್ರಹಣೆಯಲ್ಲಿ ಉಂಟಾಗಿರುವ ಸಮಸ್ಯೆಗಳನ್ನು ತಕ್ಷಣ ಬಗೆಹರಿಸದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.

ಎರಡು ಅಥವಾ ಮೂರು ದಿನಕ್ಕೊಮ್ಮೆ ಮಾತ್ರ ನೀರು ಸರಬರಾಜು ಮಾಡಲಾಗುತ್ತಿದೆ. 23 ವಾರ್ಡ್ಗಳಿಗೆ ಕಸ ಸಂಗ್ರಹಿಸಲು ನಿಯೋಜಿಸಿರುವ ಟಿಪ್ಪರ್ ವಾಹನಗಳು ಪ್ರತಿದಿನ ಬರುತ್ತಿಲ್ಲ ಎಂದು ಆರೋಪಿಸಿದರು.

ಉಪಾಧ್ಯಕ್ಷೆ ಉಷಾ ಸತೀಶ್ ಮಾತನಾಡಿ, ‘ಕಳೆದ ನಾಲ್ಕು ತಿಂಗಳಲ್ಲಿ ಸದಸ್ಯರ ಸಹಕಾರದಿಂದ ಹಲವು ಉತ್ತಮ ಕೆಲಸಗಳು ನಡೆದಿವೆ. ಆದರೆ ವಾರ್ಡ್ಗಳಿಗೆ ಭೇಟಿ ನೀಡುವ ಯೋಜನೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಾಧ್ಯವಾಗಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

ಸದಸ್ಯ ಶೈಲೇಶ್ ಮಾತನಾಡಿ, ಚನ್ನಕೇಶವಸ್ವಾಮಿ ಜಾತ್ರೆ ವೇಳೆ ತಾತ್ಕಾಲಿಕವಾಗಿ ಹಾಕಲಾಗಿದ್ದ, 20 ಬೀದಿ ದೀಪಗಳ ಬಗ್ಗೆ ಗುತ್ತಿಗೆದಾರರಿಂದ ಮಾಹಿತಿ ಪಡೆಯಬೇಕು ಎಂದು ಆಗ್ರಹಿಸಿದರು.

ಸಭೆಯಲ್ಲಿ ಮುಖ್ಯಾಧಿಕಾರಿ ಬಸವರಾಜು ಟಾಕಪ್ಪ ಶಿಗ್ಗಾವಿ ಸೇರಿದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-36-1267748106

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.