ಬೇಲೂರು: ತಾಲ್ಲೂಕಿನ ಕಣಗುಪ್ಪೆ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ 7 ಗಂಟೆಯ ವೇಳೆ ಸಲಗವೊಂದು ಗ್ರಾಮದ ರಾಜಶೆಟ್ಟಿ (65) ಎಂಬುವವರನ್ನು ತುಳಿದು ಸಾಯಿಸಿದ್ದು, ಇದರಿಂದ ಆಕ್ರೋಶಗೊಂಡ ಕಾಫಿ ಬೆಳೆಗಾರರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಮನೆಯ ಪಕ್ಕದಲ್ಲಿದ್ದ ತೋಟಕ್ಕೆ ಬೆಳಿಗ್ಗೆಯೇ ತೆರಳಿ ಕೆಲಸ ಮಾಡುತ್ತಿದ್ದ ರಾಜಶೆಟ್ಟಿ ಅವರನ್ನು ಕಾಡಾನೆ ಕೊರೆಯಿಂದ ತಿವಿದು, ಕಾಲಿನಿಂದ ತುಳಿದು ಕೊಂದಿದೆ. ಕಾಫಿ ಎಲೆ, ಕೊಂಬೆಗಳನ್ನು ಮೃತದೇಹದ ಮೇಲೆ ಹಾಕಿ, ಕೆಲಕೆಲ ಅಲ್ಲಿಯೇ ಇದ್ದು ತೆರಳಿದೆ.

ಅರಣ್ಯ ಸಚಿವರು ಸ್ಥಳಕ್ಕೆ ಬರಬೇಕು ಎಂದು ಪಟ್ಟು ಹಿಡಿದ ಗ್ರಾಮಸ್ಥರು, ಇಲಾಖೆಯ ಪ್ರಮುಖ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ವಿರುದ್ದ ಧಿಕ್ಕಾರ ಕೂಗಿದರು. ಅರಣ್ಯ ಸಚಿವರು ಸ್ಥಳಕ್ಕೆ ಆಗಮಿಸುವವರೆಗೂ ಮೃತದೇಹ ಎತ್ತಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದರು.

ಕಾಫಿ ಬೆಳೆಗಾರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪರಮೇಶ್ ಮಾತನಾಡಿ, ಪ್ರಾಣಿಗಳು ಸತ್ತು ಹೋದರೆ ವಿಧಾನಸೌಧವೇ ಅಲ್ಲುಗಾಡುತ್ತದೆ. ಆದರೆ ಮಾನವನ ಪ್ರಾಣಕ್ಕೆ ಬೆಲೆ ಇಲ್ಲದಂತಾಗಿದೆ. ನಮಗೆ ಪರಿಹಾರ ಬೇಡ. ನಾವೇ ಚಂದಾ ಎತ್ತಿ ಸರ್ಕಾರಕ್ಕೆ ಹಣ ಕೊಡುತ್ತೇವೆ. ಆನೆಗಳನ್ನು ಸ್ಥಳಾಂತರ ಮಾಡಿ ಎಂದು ಒತ್ತಾಯಿಸಿದರು.

ಕಳೆದ ವಾರ ಕೇಂದ್ರ ಅರಣ್ಯ ಸಚಿವರನ್ನು ಭೇಟಿ ಮಾಡಿ, ನಮ್ಮ ಸಮಸ್ಯೆಗಳ ಬಗ್ಗೆ ಹೇಳಿ ಬಂದಿದ್ದೇವೆ. ಅವರು ಮೇ ತಿಂಗಳಿನಲ್ಲಿ ಸ್ಥಳಕ್ಕೆ ಬರುವುದಾಗಿ ಹೇಳಿದ್ದಾರೆ. ನಾವು ಸುಮ್ಮನೆ ಕುಳಿತಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಈ ಬಗ್ಗೆ ಒತ್ತಡ ಹೇರುತ್ತಿದ್ದೇವೆ. ಆದರೆ ಬೆಳೆಗಾರರು ನಮಗೆ ಸಹಕಾರ ಕೊಡಬೇಕು ಎಂದರು.

ಕಾಫಿ ಬೆಳೆಗಾರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ವೈ.ಎಸ್. ಸಿದ್ದೇಗೌಡ ಮಾತನಾಡಿ, ದುಡಿದು ತಿನ್ನುವ ರೈತರ ಬಗ್ಗೆ ಸರ್ಕಾರ ಕಾಳಜಿ ವಹಿಸಬೇಕಿದೆ. ಅನೇಕ ಬಾರಿ ಕಾಡಾನೆ ಸಮಸ್ಯೆ ಬಗೆಹರಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಬೆಳೆ ನಷ್ಟಕ್ಕೆ ಪರಿಹಾರ ತುಂಬಲು ಆಗುವುದಿಲ್ಲ. ಆದ್ದರಿಂದ ಕಾಡಾನೆ ಸ್ಥಳಾಂತರ ಮಾಡಬೇಕು ಎಂದು ಒತ್ತಾಯಿಸಿದರು.

ಗ್ರಾಮಸ್ಥ ಕಣಗುಪ್ಪೆ ಕುಮಾರ್ ಮಾತನಾಡಿ, ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಆನೆಗಳು ಬಂದಿರುವ ಬಗ್ಗೆ ತಿಳಿಸಿದ್ದರೂ ಸ್ಪಂದಿಸುವುದಿಲ್ಲ ಎಂದು ದೂರಿದರು. ಕಾಫಿ ಬೆಳೆಗಾರರ ಸಂಘದ ಬಸವರಾಜು ಮಾತನಾಡಿ, ಕಾಡಾನೆ ಭಯದಿಂದ ಡಿಸೆಂಬರ್, ಜನವರಿಯಲ್ಲಿ ಕಾಫಿ ಕೊಯ್ಲು ಮಾಡಲು ಸಾಧ್ಯವಾಗಲಿಲ್ಲ. ಕಾರ್ಮಿಕರ ರಕ್ಷಣೆ ಮಾಡಲು ಆಗುತ್ತಿಲ್ಲ. ಒಂದು ಗಿಡವನ್ನು ನೆಟ್ಟು ಪೋಷಿಸಿ, ಕಾಫಿ ಕೊಯ್ಯಲು ಐದು ವರ್ಷ ಬೇಕು. ಆದರೆ ಆನೆಗಳು ಕ್ಷಣ ಮಾತ್ರದಲ್ಲಿ ಹಾಳು ಮಾಡುತ್ತಿವೆ ಎಂದರು.

ಕಾಫಿ ಬೆಳೆಗಾರರ ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಮಂಜುನಾಥಶೆಟ್ಟಿ, ಕಾಂಗ್ರೆಸ್ ಮುಖಂಡ ಎಚ್.ಕೆ. ಜವರೇಗೌಡ ಮಾತನಾಡಿದರು. ಶಾಸಕ ಎಚ್.ಕೆ. ಸುರೇಶ್, ಪ್ರತಿಭಟನಕಾರರ ಮನವೊಲಿಸಿದರು. ನಂತರ ಪ್ರತಿಭಟನೆ ನಿಲ್ಲಿಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಬೇಲೂರಿನ ಸಾರ್ವಜನಿಕ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಯಿತು.

ಮೃತರ ಕುಟುಂಬದವರಿಗೆ ಅರಣ್ಯ ಇಲಾಖೆಯ ₹20ಲಕ್ಷ ಪರಿಹಾರದ ಚೆಕ್ ಅನ್ನು ಶಾಸಕ ಎಚ್.ಕೆ.ಸುರೇಶ್ ವಿತರಿಸಿದರು. ತೀರ್ಥಪ್ರಸಾದ್, ಸತೀಶ್, ನಟರಾಜು, ಮಲ್ಲಿಕಾರ್ಜುನ, ಅಣ್ಣಪ್ಪ, ವೀರಭದ್ರಶೆಟ್ಟಿ, ಗುರುರಾಜು, ಮಂಜುನಾಥ್, ಪ್ರಕಾಶ್, ಎಸ್ಪಿ ಶುಭನ್ವಿತಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ, ಎಡಿಸಿ ಜಗದೀಶ್, ತಹಶೀಲ್ದಾರ್ ಶ್ರೀಧರ್ ಕಂಕಣವಾಡಿ, ಡಿವೈಎಸ್ಪಿ ಗೋಪಿ, ಡಿಎಫ್ಒ ಸೌರಭ್ ಕುಮಾರ್, ಎಸಿಎಫ್ ಮೋಹನ್ ಕುಮಾರ್, ಆರ್ಎಫ್ಒ ಯತೀಶ್, ಪೊಲೀಸ್ ಇನ್ಸ್ಪೆಕ್ಟರ್ ರೇವಣ್ಣ, ಇನ್ಸ್ಪೆಕ್ಟರ್ ಜಗದೀಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-36-12486812

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.