ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂವಿಧಾನದ ಆಶಯದಂತೆ ಬದುಕಿರಿ: ಶಾಸಕ ಎಚ್.ಕೆ.ಸುರೇಶ್

Published 26 ಜನವರಿ 2024, 13:57 IST
Last Updated 26 ಜನವರಿ 2024, 13:57 IST
ಅಕ್ಷರ ಗಾತ್ರ

ಬೇಲೂರು: ಭಾರತೀಯರಾದ ನಾವು ಸಂವಿಧಾನದ ಆಶಯದಂತೆ ಪ್ರೀತಿ, ವಿಶ್ವಾಸದಿಂದ ಜೀವನ ನಡೆಸಬೇಕು ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು.

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ  ಇಲ್ಲಿ ಆಯೋಜಿಸಿದ್ದ,ಗಣರಾಜ್ಯೋತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  ರಾಜ್ಯ ಸರ್ಕಾರ  ಸಂವಿಧಾನ ಜಾಗೃತಿ ಜಾಥಾ ಮೂಲಕ ಸಂವಿಧಾನದ ಅರಿವು ಮೂಡಿಸುವಲ್ಲಿ ಇತಿಹಾಸ ನಿರ್ಮಿಸಿದೆ ಎಂದರು.

ದ್ವಜಾರೋಹಣ ನೆರವೇರಿಸಿದ ತಹಶೀಲ್ದಾರ್ ಎಂ.ಮಮತಾ ಮಾತನಾಡಿಸಂವಿಧಾನದಿಂದ ದೇಶವು ಅತ್ಯಂತ ಯಶಸ್ವಿ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ ಎಂದರು.

ಪೊಲೀಸ್, ಗೃಹ ರಕ್ಷಕ ದಳ ಹಾಗೂ ವಿದ್ಯಾರ್ಥಿಗಳ ಪಥ ಸಂಚಲನ, ದ್ವಜ ವಂದನೆ ಸಲ್ಲಿಸಿದರು. ವಿವಿಧ ಶಾಲೆಗಳ 800ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರದರ್ಶೀಸಿದ ಹೊಯ್ಸಳ ವೈಭವ ನೃತ್ಯ ರೂಪಕ ಆಕರ್ಷಕವಾಗಿತ್ತು.

 ರಾಷ್ಟ್ರೀಯ ತೆಂಗು ಅಭಿವೃದ್ಧಿ ಮಂಡಳಿ ಉಪಾಧ್ಯಕ್ಷ ಬೆಣ್ಣೂರು ರೇಣುಕುಮಾರ್, ಪುರಸಭೆ ಅಧ್ಯಕ್ಷೆ ತೀರ್ಥಕುಮಾರಿ ವೆಂಕಟೇಶ್, ಉಪಾಧ್ಯಕ್ಷೆ ದಿವ್ಯ ಗಿರೀಶ್, ತಾ.ಪಂ. ಇಒ ಸತೀಶ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ.ನಾರಾಯಣ್, ಪೊಲೀಸ್ ವೃತ್ತ ನಿರೀಕ್ಷಕ ಜಯರಾಂ, ಪುರಸಭೆ ಮುಖ್ಯಾಧಿಕಾರಿ ಸುಜಯ್ ಕುಮಾರ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT