ಬುಧವಾರ, 27 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿಗಳನ್ನು ಉತ್ತಮ ಪ್ರಜೆಗಳಾಗಿಸಿ: ಶಾಸಕ ಸುರೇಶ್

Published 5 ಸೆಪ್ಟೆಂಬರ್ 2023, 12:54 IST
Last Updated 5 ಸೆಪ್ಟೆಂಬರ್ 2023, 12:54 IST
ಅಕ್ಷರ ಗಾತ್ರ

ಬೇಲೂರು: ಶಿಕ್ಷಕ ವೃತ್ತಿ ಅತ್ಯಂತ ಶ್ರೇಷ್ಠವಾಗಿದ್ದು, ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿಸುವ ಜವಾಬ್ದಾರಿ ಅವರ ಮೇಲಿದೆ ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು.

ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಮಂಗಳವಾರ ಇಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಕ ವೃತ್ತಿ ಭ್ರಷ್ಟಾಚಾರ ರಹಿತದ ವೃತ್ತಿಯಾಗಿದೆ. ಶಿಕ್ಷಕರ ಸಮಸ್ಯೆ ನಿವಾರಣೆ, ಗುರುಭವನ ನಿರ್ಮಾಣಕ್ಕೆ ಬದ್ಧನಾಗಿದ್ದೇನೆ ಎಂದರು.

ತಹಶೀಲ್ದಾರ್ ಎಂ.ಮಮತ ಮಾತನಾಡಿ,  ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮೌಲ್ಯ, ಜೀವನದ ಮೌಲ್ಯ ತಿಳಿಸುವುದು, ಅವರಲ್ಲಿ ಅಡಗಿರುವ ಆದಮ್ಯ ಚೇತನವನ್ನು ಹೊರತವುದು, ಸೋಲು-ಗೆಲುವನ್ನು ಸಮಚಿತ್ತತೆಯಿಂದ ಕಾಣುವ ಮನಸ್ಥಿತಿ,   ತಂದೆ-ತಾಯಿಯರನ್ನು ಗೌರವುದನ್ನು ಶಿಕ್ಷಕರು ಕಲಿಸಬೇಕಿದೆ ಎಂದರು.  ಮುಖ್ಯಭಾಷಣಕಾರ ಚಂದ್ರಶೇಖರ್ ಮಾತನಾಡಿದರು.

ನಿವೃತ್ತ ಶಿಕ್ಷಕರುಹಾಗೂ ಶಿಕ್ಷಕರ ಸಾಧಕ ಮಕ್ಕಳನ್ನು ಸನ್ಮಾನಿಸಲಾಯಿತು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಕಾಧಿಕಾರಿ ದಯಾನಂದ್, ಕ್ಷೇತ್ರಶಿಕ್ಷಣಾಧಿಕಾರಿ ಕೆ.ಪಿ.ನಾರಾಯಣ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಆರ್.ಮಂಜುನಾಥ್,  ಪ್ರೌಢ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಹೇಮಂತ್ ಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಬಿ.ಪಾಲಾಕ್ಷ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಜಗದೀಶ್ ನಾಯಕ್, ಪ್ರೌಢ ಶಾಲಾ ಮುಖ್ಯಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ವೆಂಕಟೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT