ಬೇಲೂರು: ಇಲ್ಲಿನ ಪುರಸಭೆ ಅಧ್ಯಕ್ಷರಾಗಿ ಅಕ್ರಂ ಷರೀಫ್ ಅವಿರೋಧವಾಗಿ ಆಯ್ಕೆಯಾದರು. ಸೋಮವಾರ ನಡೆದ ಚುನಾವಣೆಯಲ್ಲಿ ಅಕ್ರಂ ಷರೀಫ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಯಾಗಿದ್ದ ತಹಶೀಲ್ದಾರ್ ಶ್ರೀಧರ್ ಕಂಕಣವಾಡಿ ಅವರು ನಿಯಮದ ಪ್ರಕಾರ ಅಕ್ರಂ ಷರೀಫ್ ಆಯ್ಕೆಯನ್ನು ಘೋಷಿಸಿದರು.

2025ರ ಜೂನ್ 4ರಂದು ಎ.ಆರ್.ಅಶೋಕ್ ಅವರ ವಿರುದ್ಧ ಅವಿಶ್ವಾಸ ಮಂಡನೆಯಾಗಿದ್ದು, ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿತ್ತು. ಅಂದಿನಿಂದ ಪುರಸಭೆ ಹಂಗಾಮಿ ಅಧ್ಯಕ್ಷರಾಗಿ ಉಪಾಧ್ಯಕ್ಷೆ ಉಷಾ ಸತೀಶ್ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಎ.ಆರ್. ಅಶೋಕ್ ಪ್ರಕರಣವನ್ನು ಹಿಂಪಡೆದಿದ್ದರಿಂದ ಸೋಮವಾರ ಚುನಾವಣೆ ನಡೆಯಿತು. ಒಂದು ವರ್ಷದ ನಂತರ ಅಧ್ಯಕ್ಷರ ಆಯ್ಕೆಯಾಗಿದ್ದು, ಪ್ರಭಾರ ಅಧ್ಯಕ್ಷರ ಆಡಳಿತ ಅಂತ್ಯ ಕಂಡಿದೆ.

ನೂತನ ಅಧ್ಯಕ್ಷ ಅಕ್ರಂ ಷರೀಫ್ ಮಾತನಾಡಿ, ‘ಇರುವ ಚಿಕ್ಕ ಅವಧಿಯಲ್ಲಿ ಪಟ್ಟಣದ ಅಭಿವೃದ್ಧಿಗೆ ಮುಂದಾಗುತ್ತೇನೆ. ಸಾರ್ವಜನಿಕರ ಮೂಲ ಸೌಕರ್ಯಗಳಿಗೆ ಆದ್ಯತೆ ನೀಡಲಾಗುವುದು’ ಎಂದರು.

ಪುರಸಭೆ ಸದಸ್ಯ ಎ.ಆರ್.ಅಶೋಕ್ ಮಾತನಾಡಿದರು.

ಉಪಾಧ್ಯಕ್ಷೆ ಉಷಾ ಸತೀಶ್, ಪುರಸಭೆ ಸದಸ್ಯರಾದ ಬಿ.ಎ. ಜಮಾಲೂದ್ದೀನ್, ತೀರ್ಥಕುಮಾರಿ, ಜಗದೀಶ್, ಶೈಲೇಶ್, ಪುಟ್ಟಸ್ವಾಮಿ, ಆಶಾ, ರತ್ನಮ್ಮ, ದಿವ್ಯ, ಸೌಮ್ಯ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-36-53593324

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.