ಬೇಲೂರು: ಮಕ್ಕಳಲ್ಲಿರುವ ಅಪೌಷ್ಟಿಕತೆ ಹೋಗಲಾಡಿಸುವ ನಿಟ್ಟಿನಲ್ಲಿ ವಾರದಲ್ಲಿ ಎರಡು ದಿನ ಕೊಡುತ್ತಿದ್ದ ಕೋಳಿಮೊಟ್ಟೆ, ಬಾಳೆಹಣ್ಣನ್ನು 6 ದಿನ ವಿತರಣೆ ಮಾಡಲಾಗುತ್ತಿದೆ.
ತಾಲ್ಲೂಕಿನ ಹಲ್ಮಿಡಿ ಗ್ರಾಮದಲ್ಲಿ ಶಿಕ್ಷಣ ಇಲಾಖೆ ಹಾಗೂ ಅಕ್ಷರ ದಾಸೋಹ ಇಲಾಖೆ ಹಾಗೂ ಅಜೀಂ ಪ್ರೇಮ್ ಜೀ ಪೌಂಢೇಷನ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ, ಶಾಲಾ ಮಕ್ಕಳ ಪೌಷ್ಟಿಕ ಆಹಾರ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹಲ್ಮಿಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯು ಎಸ್.ಎಸ್.ಎಲ್.ಸಿ.ಯಲ್ಲಿ ಶೇ ನೂರು ಫಲಿತಾಂಶ ಪಡೆಯುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ ಮಾತನಾಡಿ, ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನವನ್ನು ಗಳಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದರು.
ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಧನಂಜಯ್, ನಾರಾಯಣಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಮೋಹನಕುಮಾರ್, ಉಪಾಧ್ಯಕ್ಷ ಪ್ರಶಾಂತ, ಸದಸ್ಯರಾದ ಪರ್ವತೇಗೌಡ, ಕರಗಡ ಕುಮಾರ್, ವಸಂತ ದೇವರಾಜ್, ಕವಿತಾ ರಘು, ವಿನೋದ ಸತೀಶ್, ಮೋಹನಕುಮಾರ್, ಮುಖ್ಯ ಶಿಕ್ಷಕಿ ಅನುಸೂಯ ಹಾಗೂ ಗ್ರಾಮದ ಮುಖಂಡರು ಭಾಗವಹಿಸಿದ್ದರು.