ಬೇಲೂರು: ಕಾಡಾನೆಗಳಿಂದ ಬೆಳೆ ಹಾನಿಯಾಗುತಿದ್ದರೂ, ಆನೆಗಳನ್ನು ಓಡಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆಂದು ಆರೋಪಿಸಿ ತೊಳಲು ಗ್ರಾಮಸ್ಥರು ಬೇಲೂರು-ಮೂಡಿಗೆರೆ ರಾಷ್ಟ್ರೀಯ ಹೆದ್ದಾರಿಯನ್ನು ಗುರುವಾರ ಬಂದ್ ಮಾಡಿ ಪ್ರತಿಭಟಿಸಿದರು.

ಗ್ರಾಮದ ಮುಖಂಡ ಕುಮಾರ್ ಮಾತನಾಡಿ, ತಾಲ್ಲೂಕಿನ ತೊಳಲು ಗ್ರಾ.ಪಂ ವ್ತಾಪ್ತಿಯ ನವಿಲಹಳ್ಳಿ, ಸಿದ್ದರಹಳ್ಳಿ, ಕಂದಾವರ, ತೊಳಲು ಸೇರಿದಂತೆ ಅಕ್ಕಪಕ್ಕದ ಗ್ರಾಮಗಳಲ್ಲಿ ಕೆಲ ದಿನಗಳಿಂದ 25ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಬೀಡುಬಿಟ್ಟು, ಒಂದು ತೋಟದಿಂದ ಮತ್ತೊಂದು ತೋಟಕ್ಕೆ ಹೋಗಿ ಬೆಳೆ ತಿಂದು ನಾಶ ಪಡಿಸುತ್ತಿವೆ. ಇದರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ನಾಶವಾಗುತ್ತಿದೆ. ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಜೀವ ಭಯದಲ್ಲಿ ಓಡಾಡುವ ಸ್ಥಿತಿ ನಿರ್ಮಾಣವಾಗಿದೆ. ಆದರೂ ಅರಣ್ಯ ಇಲಾಖೆ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂದರು.

ಕಾಫಿ ಬೆಳೆಗಾರರ ಸಂಘದ ಉಪಾಧ್ಯಕ್ಷ ವೆಂಕಟೇಶ್, ಶಶಿಕುಮಾರ್, ಮುಖಂಡರಾದ ವಸಂತ್ಕುಮಾರ್, ರಘು, ಕೋಮರಾಜ್, ಸುನೀಲ್, ದೇವರಾಜ್, ರೋಷನ್, ಅಶ್ವಥ್, ಮಹೇಶ್, ಸುಮನ್, ಅನೀಲ್, ಮಂಜು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.