ಬೇಲೂರು: ಹಳೇಬೀಡು ಹೋಬಳಿ ಐದಳ್ಳ ಕಾವಲಿನ 1,560 ಎಕರೆ ಭೂಮಿಗೆ ಸಾಗುವಳಿ ಚೀಟಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಚಳಿಗಾಲದ, ಬೆಳಗಾವಿ ಅಧಿವೇಶನದಲ್ಲಿ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಲಿದ್ದೇವೆ ಎಂದು ರಾಷ್ಟ್ರೀಯ ರೈತ ಸಂಘದ ಸಂಚಾಲಕ ಕಣಕಂಚೇನಹಳ್ಳಿ ಪಟೇಲ್ ಪ್ರಸನ್ನಕುಮಾರ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಡಿ. 8 ರಂದು ನಮ್ಮ 40 ಬೇಡಿಕೆಗಳ ಮನವಿ ಪತ್ರ ಸಲ್ಲಿಸಲಿದ್ದೇವೆ. ಐದಳ್ಳ ಕಾವಲಿನ ಭೂಮಿಯ ಸಾಗುವಳಿ ಚೀಟಿ ಇನ್ನೆರಡು ತಿಂಗಳಲ್ಲಿ ನ ನೀಡಬೇಕು. ಇಲ್ಲದಿದ್ದಲ್ಲಿ ಜನವರಿ 26 ರಂದು ಬೇಲೂರಿನಲ್ಲಿ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ರೈತ ಸಂಘದ ರಾಷ್ಟ್ರೀಯ ಘಟಕದ ಕಾರ್ಯಾಧ್ಯಕ್ಷ ಏಜಸ್ ಪಾಷ, ಕಾರ್ಯದರ್ಶಿ ಮಹಮ್ಮದ್ ದಸ್ತಗೀರ್, ರಾಷ್ಟ್ರೀಯ ಮಹಿಳಾ ಘಟಕದ ಅಧ್ಯಕ್ಷೆ ನಂಜಮ್ಮ, ರಾಜ್ಯ ಕಾರ್ಯದರ್ಶಿ ಅಯೂಬ್ ಪಾಷ, ರೈತ ಮುಖಂಡರಾದ ಹನುಮಂತು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.