ಬೇಲೂರು:ಇಲ್ಲಿನ ತಾಲ್ಲೂಕು ಕಚೇರಿಯಲ್ಲಿ ಸೋಮವಾರ ನಡೆದ ಬಸವ ಜಯಂತಿ ಆಚರಣೆಯ ಅವ್ಯವಸ್ಥೆ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯವನ್ನು ಶಾಸಕ ಎಚ್.ಕೆ. ಸುರೇಶ್ ಖಂಡಿಸಿದರು.

ಇಂದು ಬಸವಣ್ಣನವರ ಜಯಂತಿ ಅಂಗವಾಗಿ ಸಮಾಜದ ಮುಖಂಡರು ಗೌರವದಿಂದ ಮಾಲಾರ್ಪಣೆ ಮಾಡಿ, ತಾಲ್ಲೂಕು ಕಚೇರಿಯಲ್ಲಿ ಕಾರ್ಯಕ್ರಮ ನಡೆಸೋಣ ಎಂದು ಬಂದಿದ್ದೇವೆ. ಆದರೆ ಇಲ್ಲಿನ ಪರಿಸ್ಥಿತಿ ಸಂಪೂರ್ಣ ನೀರಸವಾಗಿದೆ. ಸಮಾಜದ ಮುಖಂಡರು ದಿಗ್ಭ್ರಮೆಗೆ ಒಳಗಾಗಿದ್ದಾರೆ ಎಂದು ಹೇಳಿದರು.

ರಾಷ್ಟ್ರೀಯ ಹಬ್ಬಗಳಿಗಿಂತಲೂ ಮುಂಚೆ ಪೂರ್ವಭಾವಿ ಸಭೆ ಕರೆಯುವುದು ಪದ್ಧತಿ. ಆದರೆ ಯಾವುದೂ ನಡೆದಿಲ್ಲ. ಇದು ಅಧಿಕಾರಿಗಳ ನಿರ್ಲಕ್ಷ್ಯದ ಸ್ಪಷ್ಟ ಉದಾಹರಣೆ. ಅಂಬೇಡ್ಕರ್ ಜಯಂತಿಗೂ 36 ಇಲಾಖೆಯ ಅಧಿಕಾರಿಗಳು ಹಾಜರಾಗಿಲ್ಲ. ಬಸವಣ್ಣನವರ ಜಯಂತಿಗೂ ಬರುವುದಿಲ್ಲ ಎಂದರೆ, ಇನ್ಯಾವ ಹಬ್ಬಗಳಿಗೆ ಬರುತ್ತಾರೆ ಎಂದು ಪ್ರಶ್ನಿಸಿದರು.

ಇದು ಮುಂದುವರಿದರೆ ಹೋರಾಟ ನಡೆಯುವ ಸಾಧ್ಯತೆ ಇದೆ. ಈ ವಿಷಯವನ್ನು ಸರ್ಕಾರ ಹಾಗೂ ಜಿಲ್ಲಾಧಿಕಾರಿ ಗಮನಕ್ಕೆ ತರುತ್ತೇನೆ. ಮುಂದಿನ ದಿನಗಳಲ್ಲಿ ಇಂತಹ ಘಟನೆ ಮರುಕಳಿಸಬಾರದು ಎಂದು ಎಚ್ಚರಿಸಿದರು.

ಜಯಂತಿ ಆಚರಣೆಯಲ್ಲಿ ವೀರಶೈವ ಲಿಂಗಾಯತ ಸಮಾಜದ ರಾಷ್ಟ್ರೀಯ ಉಪಾಧ್ಯಕ್ಷೆ ಚಂದ್ರಕಲಾ, ಉಪಾಧ್ಯಕ್ಷರಾದ ಯೋಗೇಶ್, ಅರುಣ್, ಪ್ರಧಾನ ಕಾರ್ಯದರ್ಶಿ ಬಳ್ಳೂರು ಮದನ್, ಯುವ ಘಟಕದ ಅಧ್ಯಕ್ಷ ಚೇತನ್, ಮಹಿಳಾ ಅಧ್ಯಕ್ಷೆ ವಿಂಪು ಸಂತೋಷ್, ನಿರ್ದೇಶಕರಾದ ಲಕ್ಷ್ಮೀನಾಗರಾಜು, ಉಮಾ, ಹರೀಶ್, ಶಿವಣ್ಣ, ಮುಖಂಡರಾದ ರವಿಕುಮಾರ್, ವಿರೂಪಾಕ್ಷ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-36-490679449

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.