ಬೇಲೂರು: ತಾಲ್ಲೂಕಿನ ಅರೇಹಳ್ಳಿ ಹೋಬಳಿಯ ಬೊಮ್ಮೇನಹಳ್ಳಿ ಗ್ರಾಮದಲ್ಲಿ ಕಾಡಾನೆಗಳ ನಿರಂತರ ಓಡಾಟದಿಂದಾಗಿ ಸ್ಥಳೀಯ ನಿವಾಸಿಗಳಲ್ಲಿ ಭಯದ ವಾತಾವರಣ ಉಂಟಾಗಿದೆ.

ಎರಡು ದಿನಗಳಿಂದ ರಾತ್ರಿಯಿಡೀ ಆಹಾರಕ್ಕಾಗಿ ಅಲೆದಾಡಿದ ಸುಮಾರು 28 ಕಾಡಾನೆಗಳ ಹಿಂಡು, ಸೋಮವಾರ ಬೆಳಿಗ್ಗೆ ತೋಟದಲ್ಲಿ ವಿಶ್ರಾಂತಿ ಪಡೆಯುತ್ತಿರುವುದು ಕಂಡುಬಂದಿದೆ. ಬಳಿಕ ಗೌರಿ ಕೆರೆಯಲ್ಲಿ ಸಾಕಷ್ಟು ನೀರು ಕುಡಿಯುವ ಮೂಲಕ ದಾಹ ನೀಗಿಸಿಕೊಂಡು ಮತ್ತೆ ಅದೇ ತೋಟದತ್ತ ತೆರಳಿ ವಿಶ್ರಾಂತಿ ಮುಂದುವರಿಸಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಒಂಟಿ ಕಾಡಾನೆಯೊಂದು ಕಿತ್ತಾವರ ಎಸ್ಟೇಟ್ನ ‘ಬಿ’ ಬ್ಲಾಕ್ನಲ್ಲಿ ಕಾಣಿಸಿಕೊಂಡು ಸ್ಥಳೀಯರಲ್ಲಿ ಮತ್ತಷ್ಟು ಆತಂಕ ಉಂಟು ಮಾಡಿದೆ. ಕಾಡಾನೆಗಳ ಹಿಂಡು ಮತ್ತು ಒಂಟಿ ಆನೆಗಳು ಸಂಚರಿಸುತ್ತಿರುವುದರಿಂದ ಜನರು ರಾತ್ರಿ ವೇಳೆಯಲ್ಲಿ ಹೊರಗೆ ಹೋಗಲು ಹೆದರುತ್ತಿದ್ದಾರೆ.

ಕಾಡಾನೆಗಳ ಚಲನವಲನವನ್ನು ಇಟಿಎಫ್ ಸಿಬ್ಬಂದಿ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ. ಗ್ರಾಮದಲ್ಲಿ ಧ್ವನಿವರ್ಧಕದ ಮೂಲಕ ಸಾರ್ವಜನಿಕರಿಗೆ ಎಚ್ಚರಿಕೆ ಸಂದೇಶಗಳನ್ನು ನೀಡಲಾಗುತ್ತಿದ್ದು, ರಾತ್ರಿ ವೇಳೆಯಲ್ಲಿ ಅನವಶ್ಯಕವಾಗಿ ಸಂಚಾರ ಮಾಡಬಾರದು, ಗುಂಪುಗಳಿಂದ ದೂರವಿರಬೇಕು. ಕಾಡು ಪ್ರದೇಶಗಳತ್ತ ತೆರಳಬಾರದು ಎಂದು ಸೂಚಿಸಲಾಗಿದೆ.

ಅರಣ್ಯ ಇಲಾಖೆ ತಕ್ಷಣವೇ ಸೂಕ್ತ ಕ್ರಮಗಳನ್ನು ಕೈಗೊಂಡು, ಕಾಡಾನೆಗಳನ್ನು ಸುರಕ್ಷಿತವಾಗಿ ಕಾಡಿನೊಳಗೆ ಓಡಿಸಲು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-36-2100182383

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.