ಬೇಲೂರು: ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳು ಹೆಚ್ಚುತ್ತಿರುವುದಕ್ಕೆ ಚಾಲಕರ ನಿರ್ಲಕ್ಷ್ಯ ಮತ್ತು ಏಕಾಗ್ರತೆ ಕೊರತೆಯೇ ಮುಖ್ಯ ಕಾರಣವಾಗಿದೆ ಎಂದು ಮೋಟಾರು ವಾಹನ ನಿರೀಕ್ಷಕ ಆಲಿಯುದ್ದೀನ್ ಹೇಳಿದರು.

ಇಲ್ಲಿನ ಜೂನಿಯರ್ ಕಾಲೇಜು ಮೈದಾನದಲ್ಲಿ ಲಯನ್ಸ್ ಸಂಸ್ಥೆಯ ವತಿಯಿಂದ ಬುಧವಾರ ಆಯೋಜಿಸಿದ್ದ, ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶೇ 99ರಷ್ಟು ಅಪಘಾತಗಳು ಚಾಲಕರ ತಪ್ಪಿನಿಂದಲೇ ಸಂಭವಿಸುತ್ತವೆ. ರಸ್ತೆ ದೋಷ ಅಥವಾ ವಾಹನದ ತಾಂತ್ರಿಕ ಸಮಸ್ಯೆಗಳಿಂದ ಅತಿ ಕಡಿಮೆ ಪ್ರಮಾಣದಲ್ಲಿ ಅಪಘಾತಗಳು ಸಂಭವಿಸುತ್ತವೆ. ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಕೆ, ನಿಯಮ ಉಲ್ಲಂಘನೆ ಹಾಗೂ ಬೇಜವಾಬ್ದಾರಿ ತನದಿಂದ ಅಪಘಾತಗಳು ಹೆಚ್ಚುತ್ತಿವೆ. ವಾಹನ ಚಲಾಯಿಸುವಾಗ ಮೊಬೈಲ್ ಬಳಸುವುದು ಕಾನೂನು ಬಾಹಿರವಾಗಿದ್ದು, ಕೈಯಲ್ಲಿ ಹಿಡಿದುಕೊಂಡಿರುವುದೇ ಶಿಕ್ಷಾರ್ಹ ಅಪರಾಧ ಎಂದು ಎಚ್ಚರಿಸಿದರು.

ರಸ್ತೆ ಸುರಕ್ಷತೆಗೆ ಶಿಸ್ತು, ತಾಳ್ಮೆ ಮತ್ತು ನಿಯಮ ಪಾಲನೆ ಅತ್ಯಗತ್ಯ. ರಸ್ತೆ ಸೂಚನಾ ಫಲಕಗಳನ್ನು ಗಮನಿಸಿ ಚಾಲನೆ ಮಾಡಬೇಕು ಎಂದು ತಿಳಿಸಿದರು.

ಲಯನ್ಸ್ ಸಂಸ್ಥೆಯ ಅಧ್ಯಕ್ಷೆ ತಾರಾಮಣಿ ಮಾತನಾಡಿ, ನನ್ನ ವಾಹನ, ನನ್ನ ಚಾಲನೆ, ನನ್ನ ಇಷ್ಟ ಎಂಬ ಮನೋಭಾವವನ್ನು ಬಿಟ್ಟು, ನಮ್ಮ ತಪ್ಪಿನಿಂದ ಇತರರಿಗೆ ಅಪಾಯವಾಗಬಾರದು ಎಂಬ ಜವಾಬ್ದಾರಿಯನ್ನು ಅರಿತು ವಾಹನ ಚಾಲನೆ ಮಾಡಬೇಕು ಎಂದರು.

ಕಾವೇರಿ ಕ್ಲಿನಿಕ್ ವೈದ್ಯಾಧಿಕಾರಿ ಡಾ. ಚಂದ್ರಮೌಳಿ ಮಾತನಾಡಿ, ವಿದ್ಯಾವಂತರೇ ರಸ್ತೆ ಸುರಕ್ಷತಾ ನಿಯಮ ಪಾಲನೆ ಮಾಡದಿರುವುದು ಆತಂಕಕಾರಿ. ಪೊಲೀಸರು ಇಲ್ಲದಿದ್ದರೂ ನಿಯಮ ಪಾಲನೆ ಮಾಡಬೇಕು ಎಂಬ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಲಯನ್ಸ್ ಸಂಸ್ಥೆಯ ಕಾರ್ಯದರ್ಶಿ ಆದರ್ಶ, ಖಜಾಂಚಿ ಸಂತೋಷ್, ಪ್ರಮುಖರಾದ ಪ್ರಭಾಕರ್, ಹೇಮಂತ್, ಕೆ.ಎಲ್. ಸುರೇಶ್, ಅಬ್ದುಲ್ ಲತೀಫ್, ಪ್ರಶಾಂತ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-36-968507956

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.