ಬೇಲೂರು: ಜನರ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಪರಿಹರಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಸರದಿಯಂತೆ ಜನಸ್ಪಂದನ ಸಭೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಇಲ್ಲಿನ ತಾಲ್ಲೂಕು ಕಚೇರಿ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಜನಸ್ಪಂದನ ಸಭೆಯಲ್ಲಿ ಅವರು ಮಾತನಾಡಿದರು.

ಎಲ್ಲ ಸಮಸ್ಯೆಗಳಿಗೂ ನಾವು ಸ್ಥಳದಲ್ಲೇ ಪರಿಹಾರ ಒದಗಿಸಲು ಸಾಧ್ಯವಿಲ್ಲ. ಕಚೇರಿಯಲ್ಲಿ ಕುಳಿತು ನೀಡುವ ನಿರ್ದೇಶನಗಳಿಂದ ಸಮಸ್ಯೆಗಳ ಆಳ ಅರಿಯಲು ಸಾಧ್ಯವಾಗುವುದಿಲ್ಲ. ಜನರ ಬಳಿಗೆ ಬಂದರೆ ಜನರ ಕುಂದುಕೊರತೆಗಳ ಬಗ್ಗೆ ತಿಳಿದುಕೊಂಡು ಸರಿಪಡಿಸಲು ಅಧಿಕಾರಿಗಳಿಗೆ ಸೂಚಿಸಬಹುದಾಗಿದೆ ಎಂದರು.

ಕಾನೂನಿನ ವ್ಯಾಪ್ತಿಯೊಳಗೆ ಸಮಸ್ಯೆಗಳನ್ನು ಪರಿಹರಿಸಲಾಗುವುದು. ವೈಯಕ್ತಿಕ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಿಲ್ಲ. ಜಿಲ್ಲಾಡಳಿತ ಕೂಡ ಜನಸ್ಪಂದನ ಸಭೆಯಲ್ಲಿ ಬಂದ ಅರ್ಜಿ ವಿಲೇವಾರಿ ಮಾಡುತ್ತಾ ಉತ್ತಮವಾಗಿ ಕೆಲಸ ಮಾಡುತ್ತಿದೆ ಎಂದರು.

ಈಗಾಗಲೇ ಜಿಲ್ಲಾ ಕೇಂದ್ರ ಹಾಸನ, ಚನ್ನರಾಯಪಟ್ಟಣ ಹಾಗೂ ಸಕಲೇಶಪುರದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಿದ್ದು, ಒಟ್ಟು 2,893 ಅರ್ಜಿಗಳು ಬಂದಿದ್ದವು. ಅದರಲ್ಲಿ 2,837 ವಿಲೇವಾರಿ ಆಗಿದೆ. ಮನೆ ಕಟ್ಟಿಕೊಂಡವರು ಸೂಕ್ತ ದಾಖಲಾತಿ, ಹಕ್ಕುಪತ್ರ ಇಲ್ಲದೇ ಇರುವ ಜಿಲ್ಲೆಯ 770ಕ್ಕೂ ಹೆಚ್ಚು ಪ್ರದೇಶಗಳನ್ನು ಗುರುತಿಸಿದ್ದು, ಅರ್ಹ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ ಮಾಡಲು ಪೂರ್ವ ತಯಾರಿ ನಡೆಸಲಾಗುತ್ತಿದೆ ಎಂದರು.

ಶಾಸಕ ಎಚ್. ಕೆ. ಸುರೇಶ್ ಮಾತನಾಡಿ, ಬೇಲೂರು ಕ್ಷೇತ್ರವು ಶಿಲ್ಪಕಲೆಗಳ ತವರೂರಾಗಿದ್ದು, ದೇಶ, ವಿದೇಶಗಳಿಂದ ಪ್ರವಾಸಿಗರನ್ನು ಸೆಳೆಯುತ್ತಿದ್ದರೂ ಸಾವಿರಾರು ಸಮಸ್ಯೆ ಎದುರಿಸುತ್ತಿದೆ. ಮಲೆನಾಡು, ಅರೆಮಲೆನಾಡು, ಬಯಲು ಸೀಮೆ ಪ್ರದೇಶ ಹೊಂದಿರುವ ವಿಶೇಷ ಕ್ಷೇತ್ರವಾಗಿದೆ. ನನ್ನ ಕ್ಷೇತ್ರವು ಅತೀ ಹಿಂದುಳಿದ ಕ್ಷೇತ್ರವಾಗಿದ್ದು, ಈ ಬಗ್ಗೆ ಸಾಕಷ್ಟು ಬಾರಿ ಕಂದಾಯ ಸಚಿವರ ಜೊತೆ ಚರ್ಚಿಸಿದ್ದೇನೆ. ಕಂದಾಯ ಇಲಾಖೆ ತಾಯಿ ಸ್ಥಾನದಲ್ಲಿದೆ. ಇಲ್ಲಿಯ ಸಮಸ್ಯೆಗಳನ್ನು ಸಚಿವರು ಆದಷ್ಟು ಬಗೆಹರಿಸುವ ನಂಬಿಕೆ ಇದೆ ಎಂದರು.

ಪುರಸಭೆಯ ಹೊರಗುತ್ತಿಗೆಯ ನೀರುಗಂಟಿಗಳು, ಐದು ವರ್ಷಗಳಿಂದ ಪಿಎಫ್ ಕಟ್ಟಿಲ್ಲ ಎಂದು ದೂರು ನೀಡಿದರು. ಪಿಎಫ್ ಕಟ್ಟದೇ ಹೇಗೆ ಸಂಬಳ ಕೊಟ್ಟಿದ್ದೀರಾ ಎಂದು ಪ್ರಶ್ನಿಸಿದ ಸಚಿವರು, ಕಾರ್ಮಿಕ ಇಲಾಖೆಯ ಅಧಿಕಾರಿ ವಿರುದ್ದ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗೆ ಸೂಚಿಸಿದರು.

ಕೋಟಿಗನಹಳ್ಳಿಯಲ್ಲಿ ಕೆಪಿಟಿಸಿಎಲ್ ಕಾಮಗಾರಿಯನ್ನು ಭೂ ಪರಿಹಾರ ನೀಡದೇ ನಡೆಸುತ್ತಿದ್ದು, ನಾವು ಕಾಮಗಾರಿ ತಡೆದರೆ ಪೊಲೀಸರು ಬಂದು ಕೆಲಸ ಮಾಡಿಸುತ್ತಿದ್ದಾರೆ ಎಂದು ಗ್ರಾಮಸ್ಥರು ದೂರಿದರು. ಇದರಿಂದ ಕೆಂಡಮಂಡಲವಾದ ಸಚಿವರು, ಪೊಲೀಸರು ಜನರ ಪರವಾಗಿ ಕೆಲಸ ಮಾಡುತ್ತಿದ್ದೀರೋ, ಇಲ್ಲ ಗುತ್ತಿಗೆದಾರರ ಪರವಾಗಿ ಕೆಲಸ ಮಾಡುತ್ತಿದ್ದಿರೋ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಂದಾಯ, ವಿದ್ಯುತ್, ಅರಣ್ಯ, ಗ್ರಾಮ ಪಂಚಾಯಿತಿ, ಅಂಗವಾಡಿ, ಲೋಕೋಪಯೋಗಿ ಮತ್ತು ಜಿಲ್ಲಾ ಪಂಚಾಯಿತಿ, ಕೃಷಿ, ತೋಟಗಾರಿಕೆ ಇಲಾಖೆ ಹಾಗೂ ಸಾರಿಗೆ ಸೇರಿದಂತೆ ಸುಮಾರು ಸುಮಾರು 1,400 ಅರ್ಜಿಗಳು ಬಂದವು.

ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ, ಸಂಸದ ಶ್ರೇಯಸ್ ಪಟೇಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭನ್ವಿತಾ, ಡಿಎಫ್ಒ ಸೌರಭ್ ಕುಮಾರ್, ಪುರಸಭೆ ಅಧ್ಯಕ್ಷೆ ಉಷಾ, ಬೇಲೂರು ಹಳೇಬೀಡು ಪ್ರಾಧಿಕಾರದ ಅಧ್ಯಕ್ಷ ಸೈಯ್ಯದ್ ತೌಫಿಕ್, ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ದೇಶಾಣಿ ಆನಂದ್, ಬಗರ್ ಹುಕುಂ ಸಮಿತಿ ಅಧ್ಯಕ್ಷ ನಾಗೇಗೌಡ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳಿದ್ದರು ಸಭೆಯಲ್ಲಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-36-912026075

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.