ಬೆಟ್ಟದಪುರ: ಯಾವುದೇ ಜ್ವರ ಬಂದರೂ ನಿರ್ಲಕ್ಷ್ಯ ಮಾಡದೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಚಪ್ಪರದಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸಂದೀಪ್ ಆರ್. ಹೇಳಿದರು.

ಸಮೀಪದ ಚಪ್ಪರದಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ರಾಷ್ಟ್ರೀಯ ಡೆಂಗಿ ತಡೆ ಮಾಸಾಚಾರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಡೆಂಗಿ ಈಡೀಸ್ ಇಜಿಪ್ಟೈ ಸೊಳ್ಳೆ ಕಚ್ಚುವುದರಿಂದ ಹರಡುತ್ತದೆ. ಜ್ವರ, ತಲೆನೋವು, ಮೈಕೈ ನೋವು, ಮೈಮೇಲೆ ಕೆಂಪು ಗುಳ್ಳೆಗಳು ಇದರ ಪ್ರಮುಖ ಲಕ್ಷಣಗಳಾಗಿವೆ. ಮನೆ ಸುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ನೀರಿನ ಪಾತ್ರೆಗಳನ್ನು ಸ್ವಚ್ಛಗೊಳಿಸಿ ಮುಚ್ಚಿಡಬೇಕು. ಮೈತುಂಬಾ ಬಟ್ಟೆ ಧರಿಸುವುದು, ಸೊಳ್ಳೆ ನಿವಾರಕ ಬಳಸಿದರೆ ರೋಗದಿಂದ ಪಾರಾಗಬಹುದು ಎಂದು ಹೇಳಿದರು.

ಆರೋಗ್ಯ ನಿರೀಕ್ಷಣಾಧಿಕಾರಿ ಎಚ್.ಎಸ್. ರವಿ, ಸಿಬ್ಬಂದಿ ಸವಿತಾ, ಗೀತಾ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-38-931317632

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.