ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಭವಾನಿ ಕಾರು ಚಾಲಕ ಅಜಿತ್‌ ಮನೆ ಮೇಲೆ ದಾಳಿ

Published 13 ಜೂನ್ 2024, 14:36 IST
Last Updated 13 ಜೂನ್ 2024, 14:36 IST
ಅಕ್ಷರ ಗಾತ್ರ

ಹಾಸನ: ಮಹಿಳೆ ಅಪಹರಣ ಪ್ರಕರಣದಲ್ಲಿ ಸಿಲುಕಿರುವ ಭವಾನಿ ರೇವಣ್ಣ ಕಾರು ಚಾಲಕ ಅಜಿತ್ ಮನೆ ಮೇಲೆ ಬುಧವಾರ ರಾತ್ರಿ ಮೂವರು ಕಿಡಿಗೇಡಿಗಳು ಕಲ್ಲು ಎಸೆದಿದ್ದಾರೆ.

ಹೊಳೆನರಸೀಪುರ ತಾಲ್ಲೂಕಿನ ಮೂಡಲಹಿಪ್ಪೆ ಗ್ರಾಮದಲ್ಲಿರುವ ಮನೆ ಬಳಿ ಬಂದು ಕಲ್ಲೆಸೆದಿದ್ದೇ ಅಲ್ಲದೆ, ಅವರ ಅಕ್ಕನ ಮಗ ಮೋಹಿತ್ ಅವರನ್ನು ಎಳೆದೊಯ್ದು ಹಲ್ಲೆ ನಡೆಸಿದ್ದಾರೆ. ಗಾಯಾಳು ಹೊಳೆನರಸೀಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಜ್ವಲ್ ರೇವಣ್ಣ ವಿರುದ್ದ ಅತ್ಯಾಚಾರ ಆರೋಪ ಮಾಡಿರುವ ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಅಜಿತ್ ವಿರುದ್ದ ಎಸ್‌ಐಟಿ ವಾರಂಟ್‌ ಜಾರಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT