ಕಿಡಿಗೇಡಿಗಳ ಬಂಧನಕ್ಕೆ ಭೀಮ್ ಆರ್ಮಿ ಒತ್ತಾಯ

ಹಾಸನ: ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನಾಗಾಥೆ ಸಾರುವ ‘ಮಹಾನಾಯಕ’ ಧಾರಾವಾಹಿ ನಿಲ್ಲಿಸುವಂತೆ ಜೀ
ಕನ್ನಡ ವಾಹಿನಿ ಬ್ಯುಸಿನೆಸ್ ಹೆಡ್ ರಾಘವೇಂದ್ರ ಹುಣಸೂರು ಅವರಿಗೆ ಬೆದರಿಕೆ ಕರೆ ಮಾಡಿರುವ ಕಿಡಿಗೇಡಿಗಳನ್ನು ಶೀಘ್ರ ಬಂಧಿಸುವಂತೆ ದ್ರಾವಿಡ ಭೀಮ್ ಆರ್ಮಿ ಅಧ್ಯಕ್ಷ ಸಂಪತ್ ಸುಬ್ಬಯ್ಯ ಒತ್ತಾಯಿಸಿದರು.
ರಾಜ್ಯದ ಪ್ರತಿ ಹಳ್ಳಿ ಹಳ್ಳಿಗಳಲ್ಲೂ ಮಹಾನಾಯಕ ಧಾರಾವಾಹಿಯನ್ನು ಮೆಚ್ಚಿಕೊಂಡಿದ್ದಾರೆ. ಇದನ್ನು ಸಹಿಸದ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಕಿಡಿಗೇಡಿ ಕೃತ್ಯ ಮಾಡುತ್ತಿರುವುದು ಖಂಡನೀಯ. ಸಮಾಜದಲ್ಲಿ ಸಾಮರಸ್ಯ ಕದಡುವ ಕೃತ್ಯಕ್ಕೆ ಕೈ ಹಾಕಿರುವ ಕಿಡಿಗೇಡಿಗಳನ್ನು ಶೀಘ್ರ ಬಂಧಿಸುವಂತೆ ಶನಿವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ಯಾರ ಒತ್ತಡಕ್ಕೂ ಮಣಿಯದೆ ಧಾರಾವಾಹಿ ಪ್ರಸಾರವನ್ನು ಮುಂದುವರಿಸಬೇಕು. ರಾಜ್ಯ ಸರ್ಕಾರ ವಾಹಿನಿ ಕಚೇರಿ ಮತ್ತು ಅದರ ಮುಖ್ಯಸ್ಥರಿಗೆ ಸೂಕ್ತ ಭದ್ರತೆ ನೀಡಬೇಕು. ಅಂಬೇಡ್ಕರ್ ಅನುಯಾಯಿಗಳು ಹಾಗೂ ಅಭಿಮಾನಿಗಳು, ಎಲ್ಲಾ ಸಂಘಟನೆಗಳು ಮಹಾನಾಯಕ ಧಾರಾವಾಹಿ ಪರ ನಿಲ್ಲಬೇಕು ಎಂದು ಮನವಿ ಮಾಡಿದರು.
ಗೋಷ್ಟಿಯಲ್ಲಿ ದ್ರಾವಿಡ ಭೀಮ್ ಆರ್ಮಿ ಜಿಲ್ಲಾಧ್ಯಕ್ಷ ಪ್ರಸಾದ್ ಎಚ್.ಆರ್., ಸದಸ್ಯರಾದ ಮಂಜು, ಶರತ್, ಅರಸೀಕೆರೆ ಟಿಪ್ಪು ಸುಲ್ತಾನ್ ವೇದಿಕೆ ತಾಲ್ಲೂಕು ಘಟಕದ ಅಧ್ಯಕ್ಷ ಮೊಹಮದ್ ಫಯಾಜ್, ಶಶಿಕುಮಾರ್ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.