ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರಕಲಗೂಡು: ಜ.1ಕ್ಕೆ ಭೀಮಾ ಕೊರೆಗಾಂವ್ ವಿಜಯೋತ್ಸವ

Published 26 ಡಿಸೆಂಬರ್ 2023, 13:35 IST
Last Updated 26 ಡಿಸೆಂಬರ್ 2023, 13:35 IST
ಅಕ್ಷರ ಗಾತ್ರ

ಅರಕಲಗೂಡು: ‘ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ತಾಲ್ಲೂಕು ಘಟಕದಿಂದ ಜ.1ರಂದು ಭೀಮ ಕೊರೆಗಾಂವ್ ವಿಜಯೋತ್ಸವ ಏರ್ಪಡಿಸಲಾಗಿದೆ’ ಎಂದು ತಾಜ್ಯ ಸಮಿತಿ ಸದಸ್ಯ ಈರೇಶ್ ಹಿರೇಹಳ್ಳಿ ತಿಳಿಸಿದರು.

‘ಸಂಜೆ 4 ಗಂಟೆಗೆ ಸಂತೆಮರೂರು ರಸ್ತೆ ಬನ್ನಿಮಂಟಪದಿಂದ ಮೆರವಣಿಗೆ ಮೂಲಕ ತಾಲ್ಲೂಕು ಕಚೇರಿ ಆವರಣಕ್ಕೆ ತೆರಳಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಗುವುದು. ಬಳಿಕಕೋಟೆ ಕೊತ್ತಲು ಗಣಪತಿ ಉದ್ಯಾನದ ಅನಕೃ ವೇದಿಕೆಗೆ ಸಾಗಿ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ’ ಎಂದು ಸೋಮವಾರ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.

2 ಸಾವಿರಕ್ಕೂ ಹೆಚ್ಚು ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ರಾಜ್ಯಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಕಾರ್ಯಕ್ರಮ ಉದ್ಘಾಟಿಸುವರು. ಕಾಂಗ್ರೆಸ್ ಮುಖಂಡ ಶ್ರೀಧರ್ ಗೌಡ ಅವರು ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಈ ಮೆರವಣಿಗೆಗೆ ಕಲಾ ತಂಡಗಳು ಮೆರಗು ನೀಡಲಿವೆ. ಹೊಳೆನರಸೀಪುರ ಕಾಂಗ್ರೆಸ್ ಯುವ ಮುಖಂಡ ಶ್ರೇಯಸ್ ಪಟೇಲ್, ವಾಣಿಜ್ಯ ಇಲಾಖೆ ಉಪ ಆಯುಕ್ತ ಚನ್ನಕೇಶವ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ತಾಲ್ಲೂಕು ಪ್ರಧಾನ ಸಂಚಾಲಕ ದುಮ್ಮಿ ಕೃಷ್ಣ, ವಕೀಲ ಶಂಕರಯ್ಯ, ಸಂಘಟನಾ ಸಂಚಾಲಕ ಧರ್ಮೇಶ್, ಸಣ್ಣಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT