ಅರಕಲಗೂಡು: ಎರಡೂವರೆ ವರ್ಷದ ಮಗುವಿನ ಮೇಲೆಬೀದಿ ನಾಯಿಗಳು ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ಪಟ್ಟಣದ ರಾಮನಾಥಪುರ ರಸ್ತೆ ಸಮಾಜ ಕಲ್ಯಾಣ ಇಲಾಖೆ ಕಚೇರಿ ಬಳಿ ಗುರುವಾರ ಸಂಜೆ ನಡೆದಿದೆ.

ಬೆಂಗಳೂರು ನಿವಾಸಿ ಶಂಕರ್ ಅವರು ತಮ್ಮ ಕುಟುಂಬದೊಂದಿಗೆ ಸಂಬಂಧಿಕರ ಮನೆಗೆ ಬಂದಿದ್ದರು. ತನ್ನ ಅಜ್ಜಿಯ ಜತೆ ಪುಟ್ಟ ಮಗುರೋಹಿತ್ ಗೌಡ ತೆರಳುತ್ತಿದ್ದ ವೇಳೆ ಏಕಾಏಕಿ ಬೀದಿ ನಾಯಿಗಳು ದಾಳಿ ನಡೆಸಿ ಬೆನ್ನು ಮತ್ತು ಕೈಯನ್ನು ಕಚ್ಚಿವೆ. ತಕ್ಷಣ ಅವುಗಳಿಂದ ಅಲ್ಲಿಂದ ಓಡಿಸಿ,ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೋಡಿಸಲಾಯಿತು.

ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಿದ್ದು, ಮಕ್ಕಳು ಹಾಗೂ ಸಾರ್ವಜನಿಕರು ಭಯದಿಂದ ತಿರುಗುವ ಪರಿಸ್ಥಿತಿ ಇದೆ. ನಾಯಿಗಳ ಹಾವಳಿ ನಿಯಂತ್ರಿಸಲು ಕ್ರಮ ಕೈಗೊಳ್ಳುವಂತೆ ನಾಗರಿಕರು ಪಟ್ಟಣ ಪಂಚಾಯಿತಿಯನ್ನು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.