ಗುರುವಾರ , ಅಕ್ಟೋಬರ್ 22, 2020
24 °C

ಹಾಸನ: ಪ್ರವಾಸಿಗರ ಸೆಳೆಯಲು ಬೈಕ್ ‌ಜಾಥಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೇಲೂರು: ಪ್ರವಾಸಿಗರನ್ನು ಸೆಳೆಯುವ ದೃಷ್ಟಿಯಿಂದ ಬೈಕ್ ಜಾಥಾದ ಮೂಲಕ ಈ ಬಾರಿಯ ಪ್ರವಾಸೋದ್ಯಮ ದಿನವನ್ನು ವಿಶೇಷವಾಗಿ ಆಚರಿಲಾಗುತ್ತಿದೆ ಎಂದು ಪ್ರವಾಸೋದ್ಯಮ ಇಲಾಖೆ ಉಪನಿ ರ್ದೇಶಕ ಎ.ಬಿ.ಸಂಜಯ್  ಹೇಳಿದರು.

ಇಲ್ಲಿನ ಚನ್ನಕೇಶವಸ್ವಾಮಿ ದೇವಸ್ಥಾನದ ಆವರಣಕ್ಕೆ ಪ್ರವಾಸೋದ್ಯಮ ದಿನಾಚರಣೆಯ ಅಂಗವಾಗಿ ಬೈಕ್ ಜಾಥಾದೊಂದಿಗೆ ಬಂದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಹಾಸನದಲ್ಲಿ ಜಿಲ್ಲಾಧಿಕಾರಿ ಆರ್‌.ಗಿರೀಶ್ ಅವರು ಈ ಜಾಥಾ ಉದ್ಘಾಟಿಸಿದ್ದಾರೆ. ಬುಲ್ ಟಸ್ಕರ್ ಸಂಸ್ಥೆಯ 30 ಬೈಕ್‌, ಸವಾರರು ಜಾಥಾದಲ್ಲಿ ಭಾಗವಹಿಸಿದ್ದಾರೆ. ಜಿಲ್ಲೆಯ ಪ್ರವಾಸಿತಾಣಗಳಲ್ಲಿ ಈ ಜಾಥಾ ಸಂಚರಿಸಲಿದೆ. ಪ್ರವಾಸಿಗರು ಮಾಸ್ಕ್, ಸ್ಯಾನಿಟೈಸರ್‌ ಉಪಯೋಗಿಸಿ, ಅಂತರ ಕಾಪಾಡಿಕೊಂಡು ಜಿಲ್ಲೆಯ ಪ್ರವಾಸಿ ತಾಣಗಳಿಗೆ ಭೇಟಿ ನೀಡಬಹುದು ಎಂದರು.

ತಹಶೀಲ್ದಾರ್ ನಟೇಶ್ ಮಾತನಾಡಿ, ಜಿಲ್ಲೆಯ ಪ್ರವಾಸೋದ್ಯಮವನ್ನು ಚುರುಕುಗೊಳಿಸಲು ಬೈಕ್ ಜಾಥಾ, ಪ್ರವಾಸಿ ತಾಣ ಸ್ವಚ್ಛಗೊಳಿಸುವ ಅಭಿಯಾನ ನಡೆಸಲಾಗುತ್ತಿದೆ ಎಂದರು.

ಚನ್ನಕೇಶವಸ್ವಾಮಿ ದೇಗುಲದ ಕಾರ್ಯನಿರ್ವಹಣಾಧಿಕಾರಿ ಉಮಾ, ಬುಲ್ ಟಸ್ಕರ್ ಸಂಸ್ಥೆಯ ನಿಖಿಲ್, ತಿಲಕ್, ಕಿರಣ, ಪ್ರಮೋದ್, ಪ್ರವಾಸೋದ್ಯಮ ಇಲಾಖೆಯ ನಾಗರಾಜು, ಹರೀಶ್, ಮಾರ್ಗದರ್ಶಿಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ತಾರಾನಾಥ್, ತಾಲ್ಲೂಕು ಅಧ್ಯಕ್ಷ ಸುಧೀಂದ್ರ, ಪುರಸಭೆ ಆರೋಗ್ಯಾಧಿಕಾರಿ ಲೋಹಿತ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು