ಮಂಗಳವಾರ, ಜೂನ್ 22, 2021
22 °C

ಗುಂಡಿ ತಪ್ಪಿಸಲು ಹೋಗಿ ಬಸ್ ಡಿಕ್ಕಿ: ಬೈಕ್‌ ಸವಾರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಕಲೇಶಪುರ: ರಸ್ತೆಯ ಗುಂಡಿ ತಪ್ಪಿಸಲು ಹೋಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಎದುರು ಬರುತ್ತಿದ್ದ ಬೈಕ್‌ಗೆ ನೇರವಾಗಿ ಡಿಕ್ಕಿ ಹೊಡೆದು ಬೈಕ್‌ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲ್ಲೂಕಿನ ಬಾಗೆ ಸಮೀಪ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.

ಬೇಲೂರು ತಾಲ್ಲೂಕು ಅಂಕಿಹಳ್ಳಿ ಗ್ರಾಮದ ಪ್ರದೀಪ್ (23) ಮೃತಪಟ್ಟ ಯುವಕ.

ಪಟ್ಟಣದಿಂದ ಊರಿಗೆ ಹೋಗುತ್ತಿದ್ದಾಗ ಕೊಡ್ಲಿಪೇಟೆ ಕಡೆಯಿಂದ ಬರುತ್ತಿದ್ದ ಬಸ್‌ ಡಿಕ್ಕಿ ಹೊಡೆದಿದೆ. ತಲೆಗೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಪಟ್ಟಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾರ್ವಜನಿಕರ ಆಕ್ರೋಶ: ರಾಷ್ಟ್ರೀಯ ಹೆದ್ದಾರಿ 75ರ ಹಾಸನ ಬಿ.ಸಿ. ರೋಡ್‌ ನಡುವಿನ ಚತುಷ್ಪಥ ರಸ್ತೆ ಕಾಮಗಾರಿ ನನೆಗುದಿಗೆ ಬಿದ್ದಿರುವುದರಿಂದಾಗಿ ಸಕಲೇಶಪುರ ಹಾಸನ ನಡುವಿನ ರಸ್ತೆ ಸಂಪೂರ್ಣ ಗುಂಡಿ ಬಿದ್ದು ಹಾಳಾಗಿದೆ. ಪ್ರದೀಪ್‌ ಸಾವಿಗೆ ರಸ್ತೆಯ ಗುಂಡಿಯೇ ಕಾರಣ ಎಂದು ಸಾರ್ವಜನಿಕರು ಆರೋಪಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು