ಎಸಿಬಿ ಬಲೆಗೆ ಬಿಲ್ ಕಲೆಕ್ಟರ್

ಹಾಸನ: ಮನೆಗೆ ನಲ್ಲಿ ಸಂಪರ್ಕ ಒದಗಿಸಲು ವ್ಯಕ್ತಿಯೊಬ್ಬರಿಂದ ಲಂಚ ಪಡೆಯುವ ವೇಳೆ ನಗರಸಭೆ ಬಿಲ್ ಕಲೆಕ್ಟರ್ ಕಿರಣ ಮೋಹನ್ ಜೇರಿಗೆ ಭ್ರಷ್ಟಾಚಾರ ನಿಗ್ರಹ ದಳ ಬಲೆಗೆ ಬಿದ್ದಿದ್ದಾರೆ.
ಚಿಗಳ್ಳಿ ಗ್ರಾಮದ ರಮೇಶ್ ಎಂಬುವರ ಮನೆಗೆ ನಲ್ಲಿ ಸಂಪರ್ಕ ಕೊಡಲು ಕಿರಣ ಮೋಹನ್ ಹಣಕ್ಕೆ ಬೇಡಿಕೆ ಇಟ್ಟಿದ್ದರು. ರಮೇಶ್ ಅವರಿಂದ ₹13,800 ಪಡೆಯುವ ವೇಳೆ ಡಿವೈಎಸ್ ಪಿ ಕೃಷ್ಣಮೂರ್ತಿ, ಇನ್ಸ್ಪೆಕ್ಟರ್ ಗಳಾದ ಶಿಲ್ಪಾ, ವೀಣಾ ನೇತೃತ್ವದಲ್ಲಿ ದಾಳಿ ನಡೆಸಿ, ಹಣದ ಸಮೇತ ಬಂಧಿಸಲಾಯಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.