ಬಿಜೆಪಿ ದೂರವಿಡಲು ಕಾಂಗ್ರೆಸ್ ಜೊತೆ ಹೊಂದಾಣಿಕೆ: ಎಚ್‌.ಡಿ.ದೇವೇಗೌಡ

7

ಬಿಜೆಪಿ ದೂರವಿಡಲು ಕಾಂಗ್ರೆಸ್ ಜೊತೆ ಹೊಂದಾಣಿಕೆ: ಎಚ್‌.ಡಿ.ದೇವೇಗೌಡ

Published:
Updated:
Deccan Herald

ಹಾಸನ : ‘ಅತಂತ್ರವಾಗಿರುವ ಕಡೆ ಕಾಂಗ್ರೆಸ್ ಜತೆ ಹೊಂದಾಣಿಕೆ ಮಾಡಿಕೊಂಡು ಸ್ಥಳೀಯ ಸಂಸ್ಥೆಗಳ ಅಧಿಕಾರ ಹಿಡಿಯಲಾಗುವುದು’ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು.

‘ಬಿಜೆಪಿ ದೂರವಿಡುವ ಉದ್ದೇಶದಿಂದಲೇ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆ ಮಾಡಲಾಗಿದೆ. ಹಾಗೆಯೇ ಮೈಸೂರು, ತುಮಕೂರು ಸೇರಿದಂತೆ ಅನಿವಾರ್ಯತೆ ಇರುವ ಕಡೆ ಕಾಂಗ್ರೆಸ್ ಜೊತೆ ಹೊಂದಾಣಿಕೆಗೆ ಸಿದ್ಧ. ಇದು ವೈಯಕ್ತಿಕ ಅಭಿಪ್ರಾಯ. ಆದರೆ ಯಾರೊಂದಿಗೂ ಮಾತುಕತೆ ನಡೆಸಿಲ್ಲ. ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ವಿದೇಶ ಪ್ರವಾಸದಲ್ಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಏನು ಹೇಳುತ್ತಾರೆ ಗೊತ್ತಿಲ್ಲ’ ಎಂದು ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದರು.

‘ಜಿಲ್ಲೆಯ ಐದು ಸ್ಥಳೀಯ ಸಂಸ್ಥೆಗಳಲ್ಲೂ ಅಧಿಕಾರ ಹಿಡಿಯುತ್ತೇವೆ. ರಾಜ್ಯದಲ್ಲಿ ಒಟ್ಟು ಸಂಖ್ಯಾಬಲ ಜೆಡಿಎಸ್‌ಗೆ ಇದೆ. ನಗರ ಪ್ರದೇಶದಲ್ಲಿ ಒಂದೇ ರೀತಿಯ ಸಮಾಜದವರು ಇರುವುದಿಲ್ಲ. ಈ ಚುನಾವಣೆಯ ಫಲಿತಾಂಶವನ್ನು ಲೋಕಸಭೆ ಚುನಾವಣೆಗೆ ಹೋಲಿಕೆ ಮಾಡಲು ಸಾಧ್ಯವಿಲ್ಲ. ಲೋಕಸಭಾ ಚುನಾವಣೆ ಹೊಂದಾಣಿಕೆ ಹಾಗೂ ಸೀಟು ಹಂಚಿಕೆ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ವರಿಷ್ಟರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಕೊಡಗು ನೆರೆ ಸಂತ್ರಸ್ತರಿಗೆ ಕೇಂದ್ರ ಈ ವರೆಗೂ ಯಾವುದೇ ಅನುದಾನ ಬಿಡುಗಡೆ ಮಾಡಿಲ್ಲ. ಕೇಂದ್ರ ನೆರವು ನೀಡದಿದ್ದರೆ ರಾಜ್ಯ ಸರ್ಕಾರವೇ ಕ್ರಮ ಕೈಗೊಳ್ಳಬೇಕಾಗುತ್ತದೆ. ಸಂಸದರ ನಿಧಿಯಿಂದ ಮಡಿಕೇರಿಗೆ ₹ 25 ಲಕ್ಷ ಹಾಗೂ ಕೇರಳಕ್ಕೆ ₹ 25 ಲಕ್ಷ ನೀಡಲಾಗುವುದು’ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !