ಅರಸೀಕೆರೆ: ಬಿಜೆಪಿ ಮುಖಂಡ ಎನ್. ಆರ್. ಸಂತೋಷ್ ಮತ ಭೇಟೆಗೆ ತೆರಳಿದ್ದ ವೇಳೆ ಗ್ರಾಮಸ್ಥರು ಘೇರಾವ್ ಹಾಕಿದ ಘಟನೆ ನಡೆದಿದೆ.
ತಾಲ್ಲೂಕಿನ ಬೆಳಗುಂಬ ಗೊಲ್ಲರಹಟ್ಟಿ ಗ್ರಾಮದಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದ್ದು, ಸಹಕಾರ ಸಂಘದ ವಿಚಾರದಲ್ಲಿ ಹಸ್ತಕ್ಷೇಪ ಮಾಡುತ್ತಿರುವುದು ಹಾಗೂ ಗ್ರಾಮದಲ್ಲಿ ಗೊಂದಲ, ಗಲಾಟೆ ಹುಟ್ಟು ಹಾಕುವುದು ಸರಿಯಲ್ಲ ಎಂದು ಗ್ರಾಮಸ್ಥರು ಆರೋಪಿಸಿದರು.
ಗ್ರಾಮಸ್ಥರು ಘೇರಾವ್ ಮಾಡಿದ್ದು, ಗೊಂದಲ ಸೃಷ್ಟಿಸುತ್ತಿರುವುದು ಖಂಡನೀಯ ಎಂದು ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಸ್ವಲ್ಪ ಹೊತ್ತು ಮಾತಿನ ಚಕಮಕಿ ನಡೆದು ಗ್ರಾಮದಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು.
ಬಿಜೆಪಿ ಮುಖಂಡ ಸಂತೋಷ್ ವಿಧಾನಸಭಾ ಕ್ಷೇತ್ರದಲ್ಲಿ ಮುಂದಿನ ಚುನಾವಣೆ ದೃಷ್ಟಿಯಲ್ಲಿರಿಸಿ ಗ್ರಾಮ ಪಂಚಾಯಿತಿವಾರು ಮಹಿಳೆಯರಿಗೆ ಮಡಿಲಕ್ಕಿ ತುಂಬುವ ಹಾಗೂ ಅರಿಶಿಣ ಕುಂಕುಮ ವಿತರಣೆ ಕಾರ್ಯಕ್ರಮ ಆಯೋಜಿಸುತ್ತಿದ್ದು ಈ ನಿಟ್ಟಿನಲ್ಲಿ ಆಯಾಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ರಾತ್ರಿ ವೇಳೆ ಸಮಾವೇಶದ ಪೂರ್ವಭಾವಿ ಸಭೆ ನಡೆಸುತ್ತಿದ್ದರು.