ಗುರುವಾರ , ಸೆಪ್ಟೆಂಬರ್ 23, 2021
24 °C
ಯಾವುದೇ ಖಾತೆ ನೀಡಿದರೂ ನಿಭಾಯಿಸುವೆ: ಸಚಿವ ಗೋಪಾಲಯ್ಯ

ಕೊಟ್ಟ ಮಾತು ಉಳಿಸಿಕೊಂಡ ಬಿಜೆಪಿ ನಾಯಕರು: ಸಚಿವ ಗೋಪಾಲಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ‘ಜೆಡಿಎಸ್‌ ತ್ಯಜಿಸಿ ಬಿಜೆಪಿ ಸೇರಿದ ನಂತರ ಕೊಟ್ಟ ಮಾತಿನಂತೆ ರಾಜ್ಯ ಮತ್ತು ಕೇಂದ್ರ ನಾಯಕರು ನನಗೆ ಸಚಿವ ಸ್ಥಾನ ನೀಡಿದ್ದಾರೆ’ ಎಂದು ನೂತನ ಸಚಿವ ಕೆ.ಗೋಪಾಲಯ್ಯ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನ ದೊರಕಿದೆ. ಯಾವುದೇ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸುತ್ತೇನೆ. ಹಾಸನ ಜಿಲ್ಲೆ ಅಥವಾ ಇತರೆ ಯಾವುದೇ ಜಿಲ್ಲೆ ಉಸ್ತುವಾರಿ ನೀಡಿದರೂ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತೇನೆ. ಖಾತೆ ಹಂಚಿಕೆ ವಿಷಯವಾಗಿ ಮಾತುಕತೆ ನಡೆಯುತ್ತಿದ್ದು, ನಿರ್ದಿಷ್ಟ ಖಾತೆಗೆ ಪಟ್ಟು ಹಿಡಿದಿಲ್ಲ ಎಂದು ಸ್ಪಷ್ಟಪಡಿಸಿದರು.

ಬಿ.ವೈ.ವಿಜಯೇಂದ್ರ ಅವರಿಗೆ ಪಕ್ಷದಲ್ಲಿ ಸ್ಥಾನ ಮಾನ ನೀಡುವ ವಿಚಾರವಾಗಿ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ಇದು ಪಕ್ಷದ ಆಂತರಿಕ ವಿಚಾರ ಆಗಿರುವುದರಿಂದ ಹಿರಿಯರು ತೀರ್ಮಾನ ಕೈಗೊಳ್ಳಲಿದ್ದಾರೆ. ಯಡಿಯೂರಪ್ಪ ಅವರು ಪಕ್ಷದ ಕಚೇರಿಗೆ ಭೇಟಿ ನೀಡಿ, ಎರಡು ತಾಸು ಕುಳಿತು ಚರ್ಚೆ ನಡೆಸಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯ ಪ್ರವಾಸ ಮಾಡಲಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಮುಂದುವರಿಯುತ್ತೇವೆ ಎಂದರು.

ಜಮೀರ್ ಅಹ್ಮದ್ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ವಿಚಾರ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ‘ನಮಗೂ ದಾಳಿಗೂ ಸಂಬಂಧವಿಲ್ಲ, ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ’ ಎಂದರು.

ಹಾಸನದಲ್ಲಿ ಕೇರಳದಿಂದ ಬಂದ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ವಿಚಾರ ಗೊತ್ತಾಗಿದೆ. ಆರೋಗ್ಯ ಇಲಾಖೆಗೆ ಅಗತ್ಯ ಕ್ರಮ ವಹಿಸಲು ಸೂಚನೆ ನೀಡಲಾಗಿದೆ. ಹಾಸನದಲ್ಲಿ ಸದ್ಯಕ್ಕೆ ವಾರಾಂತ್ಯ ಲಾಕ್‍ಡೌನ್ ಮಾಡುವ ಚಿಂತನೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.