ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಯಕರ್ತರ ಅಸಮಾಧಾನ: ಸಿ.ಎಂ ಜತೆ ಚರ್ಚಿಸುವೆ ಎಂದ ಶಾಸಕ ಪ್ರೀತಂ ಗೌಡ

ಹಿರಿಯ ನಾಯಕರ ಭೇಟಿ ಮಾಡಿ ಸಲಹೆ ಪಡೆಯುವೆ: ಶಾಸಕ ಪ್ರೀತಂ ಗೌಡ
Last Updated 9 ಆಗಸ್ಟ್ 2021, 13:22 IST
ಅಕ್ಷರ ಗಾತ್ರ

ಹಾಸನ: ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ಜಿಲ್ಲೆಯ ಸಮಸ್ಯೆ ಹಾಗೂ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸುತ್ತೇನೆ ಎಂದು ಶಾಸಕ ಪ್ರೀತಂ ಗೌಡ ತಿಳಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಕ್ಷೇತ್ರದ ಅಭಿವೃದ್ಧಿ, ಅನುದಾನದ ಕುರಿತು ಚರ್ಚಿಸಲಾಗುವುದು. ಹಾಗೆಯೇ ಸಚಿವ ಗೋವಿಂದ ಕಾರಜೋಳ, ರಾಜ್ಯ ಘಟಕದ ಅಧ್ಯಕ್ಷ ನಳೀನ್‌ ಕುಮಾರ್ ಕಟೀಲ್‌ ಮತ್ತು ಸಂಘ ಪರಿವಾರದ ನಾಯಕರನ್ನು ಭೇಟಿ ಮಾಡಿ, ಸಲಹೆ ಪಡೆಯುತ್ತೇನೆ.ಸಿ.ಎಂ ಭೇಟಿ ವೇಳೆ ಮುಂಬರುವ ತಾಲ್ಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ ಹಾಗೂ ಹಾಸನ ಬಿಜೆಪಿ ಕಾರ್ಯಕರ್ತರ ಅಸಮಾಧಾನದ ಬಗ್ಗೆಯೂ ಮಾತನಾಡುತ್ತೇನೆ’ ಎಂದು ಹೇಳಿದರು.

‘ಎಸ್. ಆರ್. ಬೊಮ್ಮಾಯಿ ಸರ್ಕಾರ ಬೀಳಿಸಲು ದೇವೇಗೌಡರು ಕಾರಣ ಎಂಬ ಪ್ರೀತಂ ಟೀಕೆ ಸರಿಯಲ್ಲ’ ಎಂಬ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಶಾಸಕ,‘ದೇಶಕ್ಕೆ 1947ರಲ್ಲಿ ಸ್ವಾತಂತ್ರ್ಯ ಬಂತು. ಆಗ ಕುಮಾರಸ್ವಾಮಿ ಹುಟ್ಟಿರಲಿಲ್ಲ. ಆದರೂ ಸ್ವಾತಂತ್ರ್ಯ ದಿನಾಚರಣೆ ದಿನದಂದು ದೊಡ್ಡದಾಗಿ ಭಾಷಣ ಮಾಡುತ್ತಾರೆ. ಅವರು ಪುಸ್ತಕ ನೋಡಿ ಕಲಿತಿರುತ್ತಾರೆ. ಹಾಗೆಯೇ ನಾನು ಪುಸ್ತಕ ನೋಡಿ ತಿಳಿದುಕೊಂಡಿದ್ದೇನೆ. ಎಲ್ಲದಕ್ಕೂ ನಾನೇ ಇರಬೇಕಾಗಿಲ್ಲ. ಕುಮಾರಸ್ವಾಮಿ
ಅವರು ಆರು ಬಾರಿ ಶಾಸಕರಾದರೂ ಹಿಂದಿನ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸಿಗದ ಕಾರಣಕ್ಕೆ ಬೇಸರದಿಂದ ಈ ರೀತಿ ಮಾತನಾಡಿದ್ದಾರೆ. ಜೆಡಿಎಸ್ ನಾಯಕರ ಮನವೊಲಿಸಲು ಇಂತಹ ಹೇಳಿಕೆ ನೀಡಿದ್ದಾರೆ’ ಎಂದು ಟೀಕಿಸಿದರು.

‘ಶಾಸಕರ ಮಗ ಮತ್ತು ನಾನು ಒಂದೇ ಕಾಲೇಜಿನಲ್ಲಿ ಓದಿರುವುದು. ಕುಮಾರಸ್ವಾಮಿ ಯಾಕೆ ನಮ್ಮ ಪಕ್ಷದ ವಿಚಾರವನ್ನು ವೈಯಕ್ತಿಕವಾಗಿ ತೆಗೆದುಕೊಂಡಿದ್ದಾರೆ ಗೊತ್ತಿಲ್ಲ. ನಮ್ಮ ಪಕ್ಷದ ಗೊಂದಲವನ್ನು ಹಿರಿಯರ ಮಾರ್ಗದರ್ಶನದಲ್ಲಿ ಬಗೆಹರಿಸಿಕೊಳ್ಳಲಾಗುವುದು’ ಎಂದು ತಿರುಗೇಟು ನೀಡಿದರು

‘ನಾನು ಟಾಸ್ಕ್‌ ಮಾಸ್ಟರ್‌ ಇದ್ದಂತೆ ಮಾತನಾಡುವುದೇ ಕೆಲಸ ಆಗಬಾರದು. ಹಿರಿಯರಾದ ಬಿ.ಎಸ್‌.ಯಡಿಯೂರಪ್ಪ ಹೇಳಿದಂತೆ ಮಾತು ಸಾಧನೆ ಆಗಬಾರದು. ಸಾಧನೆ ಮಾತನಾಡಬೇಕು. ಅದೇ ರೀತಿಕ್ಷೇತ್ರದ ಅಭಿವೃದ್ಧಿ ಕಡೆ ಗಮನ ಹರಿಸುತ್ತೇನೆ. ಸಿ.ಎಂ ಸೇರಿದಂತೆ ಎಲ್ಲ ಸಚಿವರ ಸಹಕಾರ ಪಡೆಯುತ್ತೇನೆ.ಮುಂದಿನ ಸಚಿವ ಸಂಪುಟ ವಿಸ್ತರಣೆ ವೇಳೆ ಹಳೆ ಮೈಸೂರು ಭಾಗದಲ್ಲಿ ಸಚಿವ ಸ್ಥಾನ ನೀಡುವ ಕುರಿತುಮಾತನಾಡುವೆ. ನಾನು ಸಾಮಾನ್ಯ ಶಾಸಕ. ಬಿ.ವೈ.ವಿಜಯೇಂದ್ರ ಅವರನ್ನು ಮಂತ್ರಿ ಮಾಡಿ ಎಂದುಹೇಳುವಷ್ಟು ದೊಡ್ಡವನಲ್ಲ. ರಾಷ್ಟ್ರೀಯ ನಾಯಕರು ಸೂಕ್ತ ಸಂದರ್ಭದಲ್ಲಿ ಅವಕಾಶ ನೀಡುತ್ತಾರೆ’ ಎಂದುಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬಿಎಸ್‌ವೈ ಸಂಪುಟ ದರ್ಜೆ ಸ್ಥಾನಮಾನ ನಿರಾಕರಿಸಿರುವ ಕುರಿತ ಪ್ರಶ್ನೆಗೆ, ಯಡಿಯೂರಪ್ಪ ಅವರು ನಾಲ್ಕು ಬಾರಿ ಮುಖ್ಯಮಂತ್ರಿಯಾದವರು. ದೇಶದ ಹಿರಿಯ ರಾಜಕಾರಣಿ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ನನ್ನ ಕ್ಷೇತ್ರದ ಬಗ್ಗೆ ಗಮನ ಹರಿಸುತ್ತೇನೆ ಎಂದು ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT